ರಾಷ್ಟ್ರಪತಿ ದ್ರೌಪದಿ ಮುರ್ಮು ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾದ ಕೇಂದ್ರ ಸಚಿವ ಕುಮಾರಸ್ವಾಮಿ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಘನತೆವೇತ್ತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರ ಘನ ಉಪಸ್ಥಿತಿಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರ ವ್ಯಪ್ತಿಯ ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ನಡೆದ ಶ್ರೀ ಸುತ್ತೂರು ಮಹಾಸಂಸ್ಥಾನದ ಸಂಸ್ಥಾಪಕರಾದ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೇ ಜಯಂತಿ ಮಹೋತ್ಸವದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಅತ್ಯಂತ ಭಕ್ತಿಪೂರ್ವಕವಾಗಿ ಪಾಲ್ಗೊಂಡಿದ್ದರು.

ಸುತ್ತೂರು ಮಠದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

- Advertisement - 

ಈ ಪುಣ್ಯ ಕಾರ್ಯಕ್ರಮದಲ್ಲಿ ಕನಕಪುರದ ಶ್ರೀ ದೇಗುಲ ಮಠದ ಶ್ರೀ ಚನ್ನಬಸವ ಸ್ವಾಮೀಜಿ ಅವರು, ರಾಜ್ಯದ ಘನತೆವೇತ್ತ ರಾಜ್ಯಪಾಲರಾದ ತಾವರ್ ಚಂದ್ ಗೆಹ್ಲೋಟ್, ಜಿಲ್ಲಾ ಉಸ್ತುವಾರಿ ಸಚಿವ ಚೆಲುವರಾಯಸ್ವಾಮಿ, ಶಾಸಕರಾದ  ನರೇಂದ್ರ ಸ್ವಾಮಿ ಅವರು ಭಾಗಿಯಾಗಿದ್ದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";