ಸಾಧಕರಿಗೆ ಅಟಲ್ ಪುರಸ್ಕಾರ ಪ್ರದಾನ ಮಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನವು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ  ಮಾಜಿ ಪ್ರಧಾನಿಗಳಾದ ಅಟಲ್ ಬಿಹಾರಿ ವಾಜಪೇಯಿ ಅವರ 101ನೇ ಜಯಂತಿ, ಅಟಲ್ ಪುರಸ್ಕಾರ ಪ್ರದಾನ ಹಾಗೂ ಸುಶಾಸನ ದಿನ ಕಾರ್ಯಕ್ರಮದಲ್ಲಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾಗವಹಿಸಿದ್ದರು.

ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್ ನಾರಾಯಣ್ ಅವರ ನೇತೃತ್ವದಲ್ಲಿ ನಡೆದ ಈ ಅರ್ಥಪೂರ್ಣ ಸಮಾರಂಭದಲ್ಲಿ ವಾಜಪೇಯಿ ಅವರನ್ನು ಸ್ಮರಿಸಿ ಭಾರತೀಯ ವಿಜ್ಞಾನ ಸಂಸ್ಥೆ ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್ ಅವರು,

- Advertisement - 

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಮಾಜಿ ಉಪ ಕುಲಪತಿ ಡಾ. ಎಸ್. ಚಂದ್ರಶೇಖರ ಶೆಟ್ಟಿ, ಬೇಸ್ ಮತ್ತು ಪ್ರಯೋಗ ಸಂಸ್ಥೆಗಳ ಸ್ಥಾಪಕರಾದ ಡಾ. ಹೆಚ್.ಎಸ್. ನಾಗರಾಜು ಅವರಿಗೆ 2025ನೇ ಸಾಲಿನ ಅಟಲ್ ಪುರಸ್ಕಾರ ಪ್ರದಾನ ಮಾಡಿದ್ದು ಸಂತಸ ಉಂಟು ಮಾಡಿತು ಎಂದು ಕುಮಾರಸ್ವಾಮಿ ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನದ ಅಧ್ಯಕ್ಷ ಪ್ರೊ. ಕೃಷ್ಣೇಗೌಡ ಸೇರಿದಂತೆ ಮತ್ತಿತರ ನಾಯಕರು ಉಪಸ್ಥಿತರಿದ್ದರು.

- Advertisement - 

 

 

Share This Article
error: Content is protected !!
";