ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನವದೆಹಲಿಯ ಸರ್ವಪ್ರಿಯ ವಿಹಾರದಲ್ಲಿರುವ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಶಾಖಾಮಠಕ್ಕೆ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
ಪರಮಪೂಜ್ಯ ಜಗದ್ಗುರುಗಳಾದ ಶ್ರೀ ನಿರ್ಮಲಾನಂದ ನಾಥ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದುಕೊಂಡರು. ಪರಮಪೂಜ್ಯರ ವಾತ್ಸಲ್ಯ, ಕರುಣೆ ಮತ್ತು ಅನುಗ್ರಹಕ್ಕೆ ಧನ್ಯನಾಗಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.