ಕೇಂದ್ರ ಸಚಿವೆ ನಿರ್ಮಲಾ ಇಂದು ಕಲ್ಯಾಣ ಕರ್ನಾಟಕ ಪ್ರವಾಸ, ಖರ್ಗೆ ವ್ಯಂಗ್ಯ

The Union Minister for Finance and Corporate Affairs, Smt. Nirmala Sitharaman meeting with the Managing Director of IMF News, Ms. Kristalina Georgieva, in New Delhi on September 07, 2022.
News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಕ್ಟೋಬರ್-15ರಂದು ಕಲ್ಯಾಣ ಕರ್ನಾಟಕಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ನೀಡಿ ಸಮಗ್ರ ಪರಿಶೀಲನೆ ಮಾಡಲಿದ್ದಾರೆ.

ಈ ಕುರಿತು ಸಚಿವೆ ಅವರು ತಮ್ಮ ಎಕ್ಸ್​  ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕದಲ್ಲಿ ಸ್ಥಾಪಿಸಲಾಗಿರುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳು, ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್ ಗಳಿಗೆ ಭೇಟಿ ನೀಡಿ, ಘಟಕಗಳ ಉದ್ಘಾಟನೆ ಮಾಡುವುದಾಗಿ ತಿಳಿಸಿದ್ದಾರೆ.

- Advertisement - 

ಕಲ್ಯಾಣ ಕರ್ನಾಟಕ ಪ್ರದೇಶದ ಪ್ರವಾಸಕ್ಕೆ ಹೊರಡುತ್ತಿದ್ದೇನೆ. ಅಲ್ಲಿ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಘಟಕಗಳನ್ನು ಸ್ಥಾಪಿಸಲಾಗಿದ್ದು -ಸದರಿ ರೈತರ ತರಬೇತಿ ಕೇಂದ್ರ ಮತ್ತು ಕಾಮನ್ ಫೆಸಿಲಿಟಿ ಸೆಂಟರ್ ಗಳನ್ನು ಭೇಟಿಯಾಗಿ ಅವುಗಳ ಉತ್ಪಾದನಾ ಚಟುವಟಿಕೆಗಳನ್ನು ವೀಕ್ಷಿಸಲಿದ್ದೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ನನ್ನ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ನಿಧಿ ಬಳಸಿ ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ತಲಾ ಒಂದು ಘಟಕವನ್ನು ಸ್ಥಾಪಿಸಲಾಗಿದೆ.
ವಿಜಯನಗರ: ಕಡಲೆ ಬೇಳೆ
, ಹುರಿದ ಕಡಲೆ, ಕಡಲೆ ಚಿಕ್ಕಿ, ಬೀಜ ತೆಗೆಯಲ್ಪಟ್ಟ ಹುಣಸೆ ಬ್ಲಾಕ್ ಮತ್ತು ಹುಣಸೆ ಪಲ್ಪ್ (ಕಡಲೆ – 200 ಕೆ.ಜಿ/ಗಂ.; ಹುಣಸೆ – 100 ಕೆ.ಜಿ/ಗಂ.)

- Advertisement - 

ಬಳ್ಳಾರಿ: ಮೆಣಸಿನ ಪುಡಿ ಮತ್ತು ಮೆಣಸಿನ ಫ್ಲೇಕ್ಸ್ (250 ಕೆ.ಜಿ/ಗಂ.).
ಕೊಪ್ಪಳ: ಹಣ್ಣಿನ ಪಲ್ಪ್
, ಹಣ್ಣಿನ ಜ್ಯೂಸ್ ಮತ್ತು ಅಮಚೂರ್ ಪುಡಿ (500 ಕೆ.ಜಿ/ಗಂ.)

ರಾಯಚೂರು: ಚಿಲಾ ಪ್ರೀಮಿಕ್ಸ್, ಕಡ್ಲೆ ಬೇಳೆ ಹಾಗೂ ತೊಗರಿ ದಾಲ್ ಮಿಲ್ (350 ಕೆ.ಜಿ/ಗಂ.). ಯಾದಗಿರಿ: ಕಡಲೆ ಬೆಣ್ಣೆ, ಹುರಿದ ಕಡಲೆ ಮತ್ತು ಕಡಲೆ ಎಣ್ಣೆ (300 ಕೆ.ಜಿ/ಗಂ.).

ಕಲಬುರಗಿ: ಸಿರಿಧಾನ್ಯ ಫ್ಲೇಕ್ಸ್, ಪಾಪ್ಸ್, ಹಿಟ್ಟು ಮತ್ತು ಸಂಪೂರ್ಣ ಸಿರಿಧಾನ್ಯಗಳು (500 ಕೆ.ಜಿ/ಗಂ.). ಬೀದರ್: ಸೋಯಾಬೀನ್ ಟೋಫು ಮತ್ತು ಸೋಯಾ ಹಾಲು (300 ಕೆ.ಜಿ/ಗಂ.).

ಈ ಪ್ರವಾಸದ ಸಮಯದಲ್ಲಿ ವಿಜಯನಗರ, ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಘಟಕಗಳ ಉದ್ಘಾಟನೆ ಮಾಡಲಾಗುತ್ತದೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಈ ಕೃಷಿ ಸಂಸ್ಕರಣೆ ಕೇಂದ್ರಗಳಿಂದ ತರಬೇತಿ ಪಡೆದ ರೈತರು ಮತ್ತು ಲಾಭ ಪಡೆಯುವ ರೈತರು ಹಾಗೂ ರೈತರ ಉತ್ಪಾದಕರ ಸಂಘಗಳು ಮತ್ತು ಅವರ ಕುಟುಂಬಗಳನ್ನು ಭೇಟಿಯಾಗಲು ಉತ್ಸುಕನಾಗಿದ್ದೇನೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ನಿರ್ಮಲಾ ಅವರ ಕರ್ನಾಟಕ ಪ್ರವಾಸ ಕುರಿತು ಪ್ರಿಯಾಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಕರ್ನಾಟಕದ ಋಣವನ್ನು ಅಂತೂ ತೀರಿಸುತ್ತಿಲ್ಲ, ಹೀಗಾದ್ರೂ ಋಣ ತೀರಿಸಲಿ ಎಂದು ಖರ್ಗೆ ತಾಕೀತು ಮಾಡಿದ್ದಾರೆ.

ನಿರ್ಮಲಾ ಕರ್ನಾಟಕದಿಂದಲೇ ಕೇಂದ್ರಕ್ಕೆ ಹೋದರೂ ಕರ್ನಾಟಕದ ಅಭಿವೃದ್ಧಿ ಕಡೆ ತಲೆ ಹಾಕಲಿಲ್ಲ ಎಂಬ ಕಾಂಗ್ರೆಸ್ಸಿಗರ ಆರೋಪಕ್ಕೆ ಒತ್ತು ನೀಡುವಂತೆ ಈಗ ಖರ್ಗೆ ಸಹ ಸಚಿವೆಯ ಕುರಿತು ವ್ಯಂಗ್ಯವಾಗಿ ಮಾತನಾಡಿದ್ದಾರೆ.

ಕಲ್ಯಾಣ ಕರ್ನಾಟಕಕ್ಕೆ ಕೇಂದ್ರ ಸಚಿವೆ ನಿರ್ಮಲಾ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಅಂತೂ ನಿರ್ಮಲಾ ಬರುತ್ತಿರೋದು ಸಂತೋಷದ ವಿಚಾರ. ಮಾಧ್ಯಮದ ಮುಲಕ ನನ್ನ ಮನವಿ ಏನೆಂದರೆ, ನಾವು ಕಲ್ಯಾಣ ಕರ್ನಾಟಕ ಮಂಡಳಿಯಿಂದ 5 ಸಾವಿರ ಕೋಟಿ ರೂ. ನೀಡುತ್ತಿದ್ದೇವೆ. ಮಹಾರಾಷ್ಟ್ರದಲ್ಲಿ ನೀಡಿದಂತೆಯೇ ನಮಗೂ ಸಹ ಮ್ಯಾಚಿಂಗ್ ಗ್ರಾಂಟ್ ಕೊಡಿ. ಕರ್ನಾಟಕದ ಋಣವಂತೂ ತೀರಿಸಲಿಲ್ಲ. ಹೀಗಾದ್ರೂ ಋಣ ತೀರಿಸಿ ಎಂದು ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದ್ದಾರೆ.

 

 

Share This Article
error: Content is protected !!
";