ಚಂದ್ರವಳ್ಳಿ ನ್ಯೂಸ್, ರಾಯಚೂರು:
ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಅತ್ಯಂತ ಭಕ್ತಿಪೂರ್ವಕವಾಗಿ ಶ್ರೀ ಮಂತ್ರಾಲಯ ಕ್ಷೇತ್ರದಲ್ಲಿ ನಡೆದ ಶ್ರೀ ರಾಘವೇಂದ್ರ ವೈಭವೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಲಿಯುಗದ ಕಾಮಧೇನು, ಪ್ರತ್ಯಕ್ಷ ದೈವ ಶ್ರೀ ರಾಘವೇಂದ್ರ ಮಹಾಸ್ವಾಮಿಗಳ ದರುಶನ ಭಾಗ್ಯ ನನ್ನದಾಯಿತು. ಕುಟುಂಬ ಸಮೇತವಾಗಿ ಶ್ರೀ ಗುರುರಾಯರ ದಿವ್ಯದರ್ಶನ ಮಾಡಿಕೊಂಡಿದ್ದು ನನ್ನನ್ನು ಭಕ್ತಿಪರವಶನನ್ನಾಗಿ ಮಾಡಿತು. ರಾಯರ ಅನುಗ್ರಹ, ಕರುಣೆ, ದಯೆ ಸರ್ವರ ಮೇಲೆಯೂ ಇರಲಿ ಎಂದು ಪ್ರಾರ್ಥಿಸಲಾಯಿತು.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತನಾಡಿ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮೀಜಿಗಳ ಆರು ದಿನಗಳ ಕಾರ್ಯಕ್ರಮವಿದೆ. ಇದರಲ್ಲಿ ಭಾಗಿಯಾಗಲು ಗುರುಗಳ ಅಪ್ಪಣೆಯ ಮೇರೆಗೆ ಬಂದಿದ್ದೇನೆ ಎಂದು ಹೇಳಿದರು.
ಸಂಜೆ ನಡೆದ ಪ್ರಶಸ್ತಿ ಪ್ರದಾನ ಹಾಗೂ ಧಾರ್ಮಿಕ ಕಾರ್ಯಕ್ರಮದಲ್ಲೂ ಕುಮಾರಸ್ವಾಮಿ ಭಾಗವಹಿಸಿದರು. ಈ ವೇಳೆ ಶ್ರೀ ಸುಬುಧೇಂದ್ರ ಶ್ರೀಗಳು, “ಕಲ್ಯಾಣ ಕರ್ನಾಟಕದ ಪ್ರಮುಖ ಜಿಲ್ಲೆ, ಸಾಕಷ್ಟು ಹಿಂದುಳಿದಿರುವ ರಾಯಚೂರು ಜಿಲ್ಲೆಯಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಸ್ಥಾಪನೆಯಾಗಬೇಕು. ಈ ನಿಟ್ಟಿನಲ್ಲಿ ತಾವು ಸಕಾರಾತ್ಮಕವಾಗಿ ಪ್ರಯತ್ನಿಸಬೇಕು ಎಂದು ಸಚಿವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಮಿಳುನಾಡು ಹೈಕೋರ್ಟ್ ನ್ಯಾಯಮೂರ್ತಿ ಆರ್.ಸುಬ್ರಮಣಿಯಂ, ರಾಜ್ಯದ ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಅವರು ಸೇರಿದಂತೆ ಅನೇಕ ಗಣ್ಯರು, ಶ್ರೀ ಗುರುರಾಯರ ಭಕ್ತರು ಉಪಸ್ಥಿತರಿದ್ದರು.

