ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅನಾರೋಗ್ಯದ ಕಾರಣದಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರನ್ನು ಕೇಂದ್ರ ಸಚಿವ ವಿ.ಸೋಮಣ್ಣ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ರಾಜಕಾರಣದಲ್ಲಿ ಸಕ್ರೀಯರಾಗಿ, ನಮಗೆಲ್ಲರಿಗೂ ಮಾರ್ಗದರ್ಶನ ನೀಡುವ ಮಣ್ಣಿನ ಮಗ ದೇವೇಗೌಡರು ಶೀಘ್ರವಾಗಿ ಗುಣಮುಖರಾಗಲಿ ಎಂದು ಸೋಮಣ್ಣ ಅವರು ಪ್ರಾರ್ಥಿಸಿದರು.

