ಫೆ.26ರಂದು ಕೇಂದ್ರ ಸಚಿವ ವಿ.ಸೋಮಣ್ಣ ಜಿಲ್ಲಾ ಪ್ರವಾಸ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ರೈಲ್ವೇ ಇಲಾಖೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರು ಇದೇ ಫೆ.26ರಂದು ಜಿಲ್ಲಾ ಪ್ರವಾಸ ಕೈಗೊಳ್ಳುವರು. ದಾವಣಗೆರೆ ಜಿಲ್ಲೆಯಿಂದ ಆಗಮಿಸುವ ಅವರು ದಾವಣಗೆರೆ-ತುಮಕೂರು ನಡುವಿನ ನೂತನ ನೇರ ರೈಲ್ವೇ ಕಾಮಗಾರಿಗಳ ಪ್ರಗತಿ ವೀಕ್ಷಣೆ ನಡೆಸುವರು.

ಸಚಿವರು ಅಂದು ಬೆಳಿಗ್ಗೆ 9.55 ರಿಂದ ಮಧ್ಯಾಹ್ನ 1.30 ರವರೆಗೆ ತೋಳುಹಣೆಸೆ-ಆನಗೋಡು, ಆನಗೋಡು ರೈಲ್ವೇ ನಿಲ್ದಾಣ, ಆನಗೋಡು-ಹೆಬ್ಬಾಳು, ಹೆಬ್ಬಾಳು-ಭರಮಸಾಗರ, ಭರಮಸಾಗರ-ಚಿತ್ರದುರ್ಗ ನಡುವಿನ ರೈಲ್ವೇ ಹಳಿ ಕಾಮಗಾರಿ ವೀಕ್ಷಿಸುವರು.

- Advertisement - 

ನಂತರ ಚಿತ್ರದುರ್ಗ ಪ್ರವಾಸಿ ಮಂದಿರದಲ್ಲಿ ಸ್ವಲ್ಪ ಸಮಯ ತಂಗುವ ಅವರು ಮಧ್ಯಾಹ್ನ 2.30ಕ್ಕೆ ಚಿತ್ರದುರ್ಗದಿಂದ ತುಮಕೂರಿಗೆ ತೆರಳುವರು ಎಂದು ಸಚಿವರ ಪ್ರವಾಸ ಕಾರ್ಯಕ್ರಮದಲ್ಲಿ ತಿಳಿಸಲಾಗಿದೆ.

 

- Advertisement - 

Share This Article
error: Content is protected !!
";