ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಮೇ. 17 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಸಚಿವ ವಿ. ಸೋಮಣ್ಣ ಅವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 11 ಗಂಟೆಗೆ ಚಿತ್ರದುರ್ಗ ನಗರಕ್ಕೆ ಆಗಮಿಸುವರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ತುಮಕೂರು–ಚಿತ್ರದುರ್ಗ–ದಾವಣಗೆರೆ ನೂತನ ರೈಲ್ವೆ ಮಾರ್ಗದ ಕಾಮಗಾರಿಯ ಪ್ರಗತಿ ಕುರಿತಂತೆ ಪರಿಶೀಲನಾ ಸಭೆ ನಡೆಸುವರು.
ನಂತರ ರೈಲ್ವೆ ಯೋಜನೆ ಕುರಿತಂತೆ ಸ್ಥಳ ಪರಿವೀಕ್ಷಣೆ ನಡೆಸುವರು. ಮಧ್ಯಾಹ್ನ 02 ಗಂಟೆಗೆ ಸಚಿವರು ಚಿಕ್ಕಮಗಳೂರಿಗೆ ಪ್ರಯಾಣ ಬೆಳೆಸುವರು ಎಂದು ರೈಲ್ವೆ ಖಾತೆ ರಾಜ್ಯ ಸಚಿವರ ಕಾರ್ಯಾಲಯದ ಸೆಕ್ಷನ್ ಅಧಿಕಾರಿಗಳು ತಿಳಿಸಿದ್ದಾರೆ.