ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸರ್ಕಾರ ಮೀಸಲು ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಹಂಚಿಕೆಯಲ್ಲಿ ಅನ್ಯಾಯ ಎಸಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶಾರದಾ ಪೂರ್ಯಾನಾಯ್ಕ್ ಅವರು ವಿಧಾನಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದರು.
ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಸರ್ಕಾರ ಅನ್ಯಾಯ ಮಾಡುತ್ತಿದೆ. ಸರಿಯಾದ ಅನುದಾನ ಸಿಗದೇ ಕ್ಷೇತ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್‌ಭವನ, ಶ್ರೀ ಮಹರ್ಷಿ ವಾಲ್ಮೀಕಿ ಭವನ, ಶ್ರೀ ಸೇವಾಲಾಲ್‌ಭವನ ನಿರ್ಮಾಣ ಸಾಧ್ಯವಾಗಿಲ್ಲ. ಜೊತೆಗೆ ಕಳೆದ 2 ವರ್ಷದಲ್ಲಿ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರಕ್ಕೆ ಒಂದೇ ಒಂದು ಮನೆಯನ್ನು ರಾಜ್ಯ ಸರ್ಕಾರ ಕೊಟ್ಟಿಲ್ಲ ಎಂದು ಬೇಸರ ಹೊರಹಾಕಿದರು.