ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ರಾಜ್ಯಾದ್ಯಂತ ಅಭೂತಪೂರ್ವ ಜನಬೆಂಬಲ ದೊರೆಯುತ್ತಿರುವುದು ಸಂತಸದ ಸಂಗತಿ. ನೀವು ತೋರಿಸಿದ ಪ್ರೀತಿಗೆ ನಾನು ಚಿರಋಣಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ಈಗಾಗಲೇ 27 ವಿಧಾನಸಭಾ ಕ್ಷೇತ್ರಗಳಲ್ಲಿ 4 ಲಕ್ಷಕ್ಕೂ ಹೆಚ್ಚು ಸದಸ್ಯತ್ವ ನೋಂದಣಿ ಆಗಿದೆ. 5700 ಕಿ.ಮೀ. ಸಂಚಾರ ಮಾಡಿರುವೆ ಎಂದು ನಿಖಿಲ್ ತಿಳಿಸಿದರು.
ಈಗಲೇ 9964 002028 ಮಿಸ್ಡ್ ಕಾಲ್ ನೀಡಿ, ಲಿಂಕ್ ಬಳಸಿ ಜೆಡಿಎಸ್ ಪಕ್ಷದ ಸದಸ್ಯತ್ವ ಸ್ವೀಕರಿಸಿ ಎಂದು ಅವರು ಮನವಿ ಮಾಡಿದ್ದಾರೆ.
ಸಶಕ್ತ, ಸಮೃದ್ಧ ಕರ್ನಾಟಕ ನಿರ್ಮಾಣಕ್ಕೆ ಶಕ್ತಿ ತುಂಬಲು ಜೆಡಿಎಸ್ ಪಕ್ಷದ ಸಕ್ರಿಯ ಸದಸ್ಯರಾಗಿ ಮತ್ತು ನಿಮ್ಮವರನ್ನು ಇಂದೇ ನೋಂದಣಿ ಮಾಡಿಸಿ ಎಂದು ನಿಖಿಲ್ ಮನವಿ ಮಾಡಿದ್ದಾರೆ.