ಯುಪಿಎಸ್ಸಿ, ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಬೆಂ.ಗ್ರಾ.ಜಿಲ್ಲೆ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ
, ಕೆ.ಎ.ಎಸ್, ಕೆಪಿಎಸ್ಸಿ ಗ್ರೂಪ್ -ಸಿ, ಆರ್.ಆರ್.ಬಿ ಮತ್ತು ಎಸ್.ಎಸ್.ಸಿ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು https://sevasindhu.karnataka.gov.in/Sevasindhu/DepartmentServices ಅಥವಾ https://dom.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಆಗಸ್ಟ್ 11 ರೊಳಗೆ ಅರ್ಜಿಸಲ್ಲಿಸಬೇಕು.

- Advertisement - 

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

- Advertisement - 

 

Share This Article
error: Content is protected !!
";