ಭಾರತೀಯ ತೈಲ ನಿಮಗದ ಅಧ್ಯಕ್ಷರಾಗಿ ವಿ.ಸತೀಶ್ ಕುಮಾರ್ ಅಧಿಕಾರ ಸ್ವೀಕಾರ  

WhatsApp
Telegram
Facebook
Twitter
LinkedIn

ಚಂದ್ರವಳ್ಳಿ ನ್ಯೂಸ್, ಬೆಂಗಳೂರು;
ಭಾರತೀಯ ತೈಲ ನಿಗಮದ ಅಧ್ಯಕ್ಷರಾಗಿ ವಿ. ಸತೀಶ್ ಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್‌ನ ಮಾರುಕಟ್ಟೆ ವಿಭಾಗದ ನಿರ್ದೇಶಕರಾಗಿ   2021 ರ ಅಕ್ಟೋಬರ್ ನಿಂದ ಕಾರ್ಯನಿರ್ವಹಿಸುತ್ತಿರುವ ಅವರು ಇದೀಗ ಅಧ್ಯಕ್ಷರಾಗಿ ಹೆಚ್ಚುವರಿ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

2022 ರ ಅಕ್ಟೋಬರ್ ನಿಂದ ಒಂದು ವರ್ಷದ ಅವಧಿಗೆ ನಿರ್ದೇಶಕರಾಗಿ (ಹಣಕಾಸು) ಹೆಚ್ಚುವರಿ ಉಸ್ತುವಾರಿ ಹೊಂದಿದ್ದರು. ಆಗ ಉಕ್ರೇನ್-ರಷ್ಯಾ ಸಂಘರ್ಷದ ಕಾರಣದಿಂದಾಗಿ ಭೌಗೋಳಿಕ ರಾಜಕೀಯ ಉದ್ವಿಗ್ನತೆಯಿಂದ ಕೂಡಿದ್ದ ಕಾಲಘಟ್ಟವಾಗಿತ್ತು. ಈ ಸವಾಲಯಗಳನ್ನು ತಮ್ಮ ವೃತ್ತಿ ಜೀವನದಲ್ಲಿ ಸಮರ್ಥವಾಗಿ ನಿಭಾಯಿಸಿದ್ದಾರೆ.

ತಮ್ಮ 35 ವರ್ಷಗಳ ವೃತ್ತಿಜೀವನದಲ್ಲಿ, ಕುಮಾರ್ ಅವರು ದೇಶದಾದ್ಯಂತ ವಿವಿಧ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ ಮತ್ತು ಪ್ರಮುಖ ಸ್ಥಾನಗಳನ್ನು ಅಲಂಕರಿಸಿದ್ದಾರೆ. ಇವರ ಅಧಿಕಾರವಧಿಯಲ್ಲಿ, ಇಂಡಿಯನ್ ಆಯಿಲ್ ತನ್ನ ರಿಟೇಲ್ ಔಟ್‌ಲೆಟ್‌ಗಳನ್ನು ಹೊಂದಿ ಹೊಸ ಸ್ವರೂಪ ಪಡೆದುಕೊಂಡಿದೆ. 

 ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳ ಮುಖ್ಯಸ್ಥರ ಸ್ಥಾನ ಅಲಂಕರಿಸಿದ್ದಾಗ ಅಡುಗೆ ಅನಿಲ ಗ್ರಾಹಕರಿಗೆ ನೇರ ಸೌಲಭ್ಯ ವರ್ಗಾವಣೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯಂತಹ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ಮುಖ್ಯ ಪಾತ್ರ ವಹಿಸಿದ್ದರು. 

 

News Desk   About Us
For Feedback - [email protected]

LATEST Post

error: Content is protected !!
WhatsApp Icon Telegram Icon