ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಆರೋಗ್ಯ ಇಲಾಖೆ ಸಂತ ಜೋಸೆಫರ ಕಾನ್ವೆಂಟ್ ಚಿತ್ರದುರ್ಗ ಇವರ ಸಹಯೋಗದೊಂದಿಗೆ ಸಂತರ ದಿನದ ಪ್ರಯುಕ್ತ ರಾಷ್ಟ್ರೀಯ ಲಸಿಕಾ ದಿನ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ ಮಾತನಾಡಿ ಪ್ರತಿ ಮಗುವಿಗೆ ಲಸಿಕೆ ಹಾಕುವುದನ್ನು ಖಚಿತಪಡಿಸಿಕೊಳ್ಳಲು ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಶ್ರಮವನ್ನು ಗುರುತಿಸಲು ಮತ್ತು ಪ್ರಶಂಸಿಸಲು ಭಾರತ ಸರ್ಕಾರವು ಮಾರ್ಚ್ 16 ಅನ್ನು ರಾಷ್ಟ್ರೀಯ ಲಸಿಕೆ ದಿನವನ್ನಾಗಿ ಆಚರಿಸುತ್ತದೆ ಎಂದು ತಿಳಿಸಿದರು.
ತೀವ್ರವಾದ ವ್ಯಾಕ್ಸಿನೇಷನ್ ಡ್ರೈವ್‌ಗಳ ಮೂಲಕ ದಿನನಿತ್ಯದ ಪ್ರತಿ ರಕ್ಷಣೆಯನ್ನು ಹೆಚ್ಚಿಸುವಲ್ಲಿ ಭಾರತವು ಗಮನಾರ್ಹ ಪ್ರಗತಿ ಸಾಧಿಸಿದೆ. ಈ ದಿನವನ್ನು ರಾಷ್ಟ್ರೀಯ ರೋಗನಿರೋಧಕ ದಿನ ಎಂದೂ ಕರೆಯಲಾಗುತ್ತದೆ ಎಂದು ಅವರು ತಿಳಿಸಿದರು.
ಲಸಿಕೆಯ ಮಹತ್ವದ ಕುರಿತು ಜಾಗೃತಿ ಮೂಡಿಸುವುದು ಈ ದಿನದ ಉದ್ದೇಶವಾಗಿದೆ. ದೇಶದಲ್ಲಿ ಮೊದಲ ಲಸಿಕೆ ದಿನಾಚರಣೆಯನ್ನು 1995ರ ಮಾರ್ಚ್ 16ರಂದು ಆಚರಣೆ ಮಾಡಲಾಯಿತು. ಅಂದು ದೇಶದಲ್ಲಿ ಪೋಲಿಯೊ ಹನಿ ಹಾಕುವ ‘ಪಲ್ಸ್ಪೋಲಿಯೊ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಎರಡು ದಶಕಗಳ ಬಳಿಕ ದೇಶದಲ್ಲಿ ಕ್ರಮೇಣ ಪೋಲಿಯೊ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿ, 2014ರಲ್ಲಿ ಭಾರತವನ್ನು ಪೋಲಿಯೊ ಮುಕ್ತ ಎಂದು ಘೋಷಿಸಲಾಯಿತು. ಮಕ್ಕಳಿಗೆ ಪೋಲಿಯೊ ಹನಿ ಜತೆಗೆ ಮಕ್ಕಳಿಗೆ ದಡಾರ, ಸಿಡುಬು, ಕ್ಷಯಗಳ ಲಸಿಕೆ ಹಾಕಿಸುವುದೂ ಮುಖ್ಯ. ಲಸಿಕೆ ದಿನದಂದು ಈ ಅಂಶಗಳ ಬಗ್ಗೆಯೂ ಅರಿವು ಮೂಡಿಸಲಾಗುತ್ತದೆ. ಸಕಾಲದಲ್ಲಿ ಲಸಿಕೆ ಹಾಕಿಸುವುದರಿಂದ ಪ್ರತಿ ವರ್ಷ ಲಕ್ಷಾಂತರ ಮಕ್ಕಳು ಸಾವಿನಿಂದ ಪಾರಾಗುತ್ತಿದ್ದಾರೆ ಲಸಿಕೆಗಳು ಮಾರಕ ರೋಗಗಳಿಂದ ಮಕ್ಕಳನ್ನು ರಕ್ಷಿಸುತ್ತವೆ ಎಂದರು.
ಜಿಲ್ಲಾ ಪೋಷಣ್ ಅಭಿಯಾನ ವ್ಯವಸ್ಥಾಪಕ ಕರಕಪ್ಪ ಮೇಟಿ ಮಾತನಾಡಿ ಬೇಸಿಗೆಯಲ್ಲಿ ಬದುಕುವ ರೀತಿ, ಶಾಖದ ಅಲೆಯಿಂದ ಯಾವರೀತಿ ಸಂರಕ್ಷಣೆ ಮಾಡಿಕೊಳ್ಳುವ ಬಗೆ ಆಹಾರ ನೀರು, ಸೇವಿಸಬೇಕು ಕಾರ್ಬೊನೆಟೆಡ್ ಕೋಲ್ಡ್‌ಡ್ರಿಂಕ್ಸ್ ಬಳಗೆ ಮಾಡಬಾರದು, ತೆಳು ಕಾಟನ್ ಬಟ್ಟೆಗಳನ್ನು ಧರಿಸಬೇಕು, ಮಸಾಲೆ ಪದಾರ್ಥಗಳನ್ನು ಕರಿದ ತಿಂಡಿಗಳನ್ನು ತಿನ್ನಬಾರದು ನಿರ್ಜಲೀಕರಣ ವಾಗದಂತೆ ಹೆಚ್ಚು ಹೆಚ್ಚು ನೀರು ಕುಡಿಯಬೇಕು ಎಂದರು.
ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಾ ನಾಯ್ಕ್, ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮುಗಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿ ಶ್ರೀ ನಿವಾಸ್ , ಶಾಲೆಯ ಮುಖ್ಯ ಉಪಾಧ್ಯಾಯ ಇರುದ್ಯಾ ರಾಣಿ, ಸಹ ಶಿಕ್ಷಕರಾದ ಸುಶೀಲಾ ಮೇರಿ,ರೀಟಾ, ದಾಕ್ಷಾಯಣಿ, ವಿಕ್ಟೋರಿಯಾ, ಕೆ.ಎಸ್.ಅಜ್ಜಯ್ಯ, ಶಿವಕುಮಾರ್, ಪ್ರಾಥಮಿಕ ಆರೋಗ್ಯ ಸುರಕ್ಷತಾಧಿಕಾರಿ ವಿಜಯಾಮ್ಮ ಆರೋಗ್ಯ ನಿರೀಕ್ಷಣಾಧಿಕಾರಿ ರೇಖಾ, ಆಶಾ ಕಾರ್ಯಕರ್ತೆ ಗೀತಾ ಉಪಸ್ಥಿತರಿದ್ದರು. 300 ವಿದ್ಯಾರ್ಥಿಗಳು ಬಾಗವಹಿಸಿದ್ದರು ಎಲ್ಲಾ ವಿದ್ಯಾರ್ಥಿಗಳಿಗೆ ಹಿಮೋಗ್ಲೋಬಿನ್ ಪರೀಕ್ಷೆ ನಡೆಸಲಾಯಿತು.