ಚಂದ್ರವಳ್ಳಿ ನ್ಯೂಸ್, ಹರಿಹರ :
ಬೆಳವಡಿ ರಾಣಿ ಮಲ್ಲಮ್ಮ ಸ್ಮರಣಾರ್ಥ ಆಯವ್ಯಯದಲ್ಲಿ “ಬೆಳವಡಿ ರಾಣಿ ಮಲ್ಲಮ್ಮ ಪ್ರತಿಷ್ಠಾನ”ಘೋಷಣೆ ಮಾಡಿರುವುದು ನಿಜಕ್ಕೂ ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಹರಿಹರ ಪಂಚಮಸಾಲಿ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.
ಈ ಮಹತ್ವದ ನಿರ್ಧಾರ ಕೈಗೊಂಡಿದ್ದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಅತ್ಯಂತ ಮುತುವರ್ಜಿ ಶ್ರಮಿಸಿದ ಬೈಲಹೊಂಗಲದ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಅರ್ಪಿಸುವುದಾಗಿ ಸ್ವಾಮೀಜಿ ತಿಳಿಸಿದ್ದಾರೆ.
ಪ್ರತಿಷ್ಟಾನ ಸ್ಥಾಪನೆಯಿಂದ ಬೆಳವಡಿ ರಾಣಿ ಮಲ್ಲಮ್ಮನ ಪರಾಕ್ರಮ ಮತ್ತು ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸುವ ಮಹತ್ವದ ಹೆಜ್ಜೆ ಇದಾಗಿದೆ ಎಂದು ವಚನಾನಂದ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ.

