ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ನಗರದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಪ್ರಥಮ ಬಾರಿಗೆ ಜನವರಿ-10ರಂದು ಶುಕ್ರವಾರ ದೇವಸ್ಥಾನದ ಪ್ರಧಾನ ಅರ್ಚಕ ಸತೀಶ್ ಸ್ವಾಮಿ ಹಾಗೂ ಆನಂದ್ ಸ್ವಾಮಿ ನೇತೃತ್ವದಲ್ಲಿ ವೈಕುಂಠ ಏಕಾದಶಿ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆ.
ಸತ್ಯನಾರಾಯಣ ಸ್ವಾಮಿ ದೇವರಿಗೆ ವಿಶೇಷ ಪೂಜಾಲಂಕಾರ, ಅಭಿಷೇಕ ಪೂಜೆ ಅಂದು ಬೆಳಿಗ್ಗೆ 6 ಗಂಟೆಯಿಂದ ದೇವರಿಗೆ ಪ್ರಕಾರೋತ್ಸವ ಉತ್ತರಭಾಗಿಲು ಪೂಜೆ, ಅಲಂಕಾರ ಸೇವೆ ಏರ್ಪಡಿಸಿರುತ್ತಾರೆ.
ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ವೈಕುಂಠ ದ್ವಾರದ ಮೂಲಕ ಸ್ವಾಮಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿ ತಮ್ಮ ತನು ಮನ ದೊಂದಿಗೆ ಸಹಕರಿಸಿ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ಸಂಘಟಕರು ವಿನಂತಿಸಿದ್ದಾರೆ.
ಕಾರ್ಯಕ್ರಮಕ್ಕೆ ತಮ್ಮ ಕುಟುಂಬ ಸಮೇತ ಆಗಮಿಸಿ ದೇವರ ಆಶೀರ್ವಾದ ಪಡೆಯಬೇಕೆಂದು ಅಯ್ಯಪ್ಪ ಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಶರಣ್ ಕುಮಾರ್, ಉಪಾಧ್ಯಕ್ಷ ಮಲ್ಲಿಕಾರ್ಜುನ, ಕಾರ್ಯದರ್ಶಿ ಎಂ ಪಿ ವೆಂಕಟೇಶ ಇವರುಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾರ್ಯದರ್ಶಿ 9342310469 ಇವರನ್ನು ಸಂಪರ್ಕಿಸುವಂತೆ ಅವರು ಕೋರಿದ್ದಾರೆ.