ವಿಶ್ವಕ್ಕೆ ಪಸರಿಸಿದ ವೀರಶೈವ ಲಿಂಗಾಯತ ಪರಂಪರೆ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ತ್ರಿವಿಧ ದಾಸೋಹದ ಶ್ರೇಷ್ಠತೆ ವಿಶ್ವಕ್ಕೆ ಪಸರಿಸಿದ ವೀರಶೈವ ಲಿಂಗಾಯತ ಪರಂಪರೆ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ದಾವಣಗೆರೆಯಲ್ಲಿ ನಡೆಯುತ್ತಿರುವ ವೀರಶೈವ ಪೀಠಾಚಾರ್ಯರು ಹಾಗೂ ಶಿವಾಚಾರ್ಯರ ಶೃಂಗ ಸಮ್ಮೇಳನ ಹಾಗೂ ಸಂಸ್ಕೃತಿ ಸಂವಧ೯ನೆಗಾಗಿ ಶ್ರೀಗಳವರ ಪಾದಯಾತ್ರೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಅವರು ಭಾಗವಹಿಸಿ ಮಾತನಾಡಿದರು.

ಭಾರತೀಯ ಪರಂಪರೆಗೆ ಮಠ-ಮಾನ್ಯಗಳ ಕೊಡುಗೆ ಬಹುದೊಡ್ಡದು, ಅದರಲ್ಲೂ ಕರ್ನಾಟಕದ ಸಾಂಸ್ಕೃತಿಕ, ಶೈಕ್ಷಣಿಕ, ಸಾಮಾಜಿಕ ವ್ಯವಸ್ಥೆಯಲ್ಲಿ ಬಹುದೊಡ್ಡ ಕ್ರಾಂತಿ ಮಾಡಿ ಶತ-ಶತಮಾನಗಳಿಂದಲೂ ಸಮಾಜದ ಕಣ್ಣಾಗಿ ಭಕ್ತರ ಪಾಲಿನ ಬೆಳಕಾಗಿ ಮಠಮಾನ್ಯಗಳು ಉತ್ತಮ ಸಮಾಜ ಕಟ್ಟಲು ಬಹುದೊಡ್ಡ ಸಮರ್ಪಣೆ ಮಾಡಿವೆ ಎಂದು ವಿಜಯೇಂದ್ರ ತಿಳಿಸಿದರು. 

- Advertisement - 

ಸಕಲ ಜೀವಾತ್ಮರಿಗೂ ಸದಾ ಒಳಿತನ್ನೇ ಬೋಧಿಸಿದ ಧರ್ಮ ವೀರಶೈವ ಲಿಂಗಾಯತ ಸಮಾಜ, ಅಂತರಂಗ ಮತ್ತು ಬಹಿರಂಗ ಶುದ್ಧಿಗೆ ಈ ಧರ್ಮ ಆದ್ಯತೆ ನೀಡಿದ್ದು ಶ್ರೀ ಜಗದ್ಗುರು ಪಂಚಾಚಾರ್ಯರ ತತ್ವಸಿದ್ಧಾಂತಗಳು, 12ನೇ ಶತಮಾನದ ಬಸವಾದಿ ಶರಣರ ಸಾಮಾಜಿಕ ಚಿಂತನೆಗಳು ಬದುಕಿ ಬಾಳುವ ಜನಾಂಗಕ್ಕೆ ಬೆಳಕಿನ ದಾರಿ ತೋರಿಸುತ್ತವೆ ಎಂದು ವಿಜಯೇಂದ್ರ ತಿಳಿಸಿದರು. ಪೂಜ್ಯ ರಂಭಾಪುರಿ ಪೀಠ, ಉಜ್ಜೈನಿ ಪೀಠ, ಕೇದಾರಪೀಠ, ಕಾಶಿ ಪೀಠ, ಶ್ರೀ ಶೈಲ ಪೀಠದ ಶ್ರೀಗಳು ಒಂದೇ ವೇದಿಕೆಯಲ್ಲಿ ನೆಲೆಗೊಂಡು ನಾಡು ಕಟ್ಟುವ ಹೊಸ ಆಯಾಮಕ್ಕೆ ಅಡಿಪಾಯ ಹಾಕಿರುವುದು ನಾಡಿನಾದ್ಯಂತ ಹರ್ಷ ತಂದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಬಾಳೆಹೊನ್ನೂರು ಶ್ರೀ ರಂಭಾಪುರಿ ಪೀಠದ ಡಾ. ವೀರಸೋಮೇಶ್ವರ ಶಿವಾಚಾರ್ಯ ಶ್ರೀಗಳು, ಉಜ್ಜಯನಿ ಸದ್ಧರ್ಮ ಪೀಠದ ಶ್ರೀ ಜಗದ್ಗುರುಗಳಾದ ಪರಮಪೂಜ್ಯ ಸಿದ್ದಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು, ಕೇದಾರ ಪೀಠದ ಜಗದ್ಗುರು ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಶ್ರೀಗಳು, ಶ್ರೀ ಕಾಶಿ ಜ್ಞಾನ ಪೀಠ ಪೂಜ್ಯ ಜಗದ್ಗುರು ಡಾ.ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದ ಶ್ರೀಗಳು,

- Advertisement - 

ಶ್ರೀಶೈಲ ಮಹಾಸಂಸ್ಥಾನ ಪೀಠದ ಪರಮ ಪೂಜ್ಯರಾದ ಜಗದ್ಗುರು ಡಾ. ಶ್ರೀ ಚನ್ನಸಿದ್ಧರಾಮ ಶಿವಾಚಾರ್ಯ ಶ್ರೀಗಳು, ಪರಮಪೂಜ್ಯ ರೇಣುಕ ಶಿವಾಚಾರ್ಯ ಶ್ರೀಗಳು, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ,

ಸಚಿವರಾದ ಈಶ್ವರ್ ಖಂಡ್ರೆ, ಎಸ್.ಎಸ್.ಮಲ್ಲಿಕಾರ್ಜುನ್, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ, ಶಾಸಕ ವಿಜಯಾನಂದ ಕಾಶಪ್ಪನವರ್, ವಿಧಾನ ಪರಿಷತ್ ಸದಸ್ಯ ಧನಂಜಯ ಸರ್ಜಿ, ಮಾಜಿ ವಿಧಾನ ಪರಿಷತ್ ಸದಸ್ಯ ಶಿವಯೋಗಿ ಸ್ವಾಮಿ, ಸಂಸದೆ ಪ್ರಭಾ ಮಲ್ಲಿಕಾರ್ಜುನ್, ನಾಡಿನ ವಿವಿಧ ಮಠಗಳ ಪರಮಪೂಜ್ಯ ಶ್ರೀಗಳು, ಸಮಾಜದ ಪ್ರಮುಖರು, ಗಣ್ಯರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಮಾಜದ ಬಂಧುಗಳು ಉಪಸ್ಥಿತರಿದ್ದರು.

 

 

 

Share This Article
error: Content is protected !!
";