ನಾಡಿನ ಹಿರಿಯ ಪತ್ರಕರ್ತ ವಸಂತ್ ನಾಡಿಗೇರ್ ಇನ್ನಿಲ್ಲ…

News Desk

ಚಂದ್ರವಳ್ಳಿ ನ್ಯೂಸ್,  ಬೆಂಗಳೂರು:

ನಾಡಿನ ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕದ ಸಂಪಾದಕರಾದ ವಸಂತ ನಾಡಿಗೇರ ಅವರು ಸೋಮವಾರ ಬೆಳಗಿನ ಜಾವ 3.13ಕ್ಕೇ ನಿಧನರಾದರು. ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೂಲತಃ ಹಾವೇರಿ ಜಿಲ್ಲೆಯ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು. ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ.

ವಸಂತ ನಾಡಿಗೇರ ಅವರ ವೃತ್ತಿ ಜೀವನದ ಹಿರಿತನದ ಸೇವೆ ಗುರುತಿಸಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘವು ಮೈಸೂರಿನಲ್ಲಿ ನಡೆದ ಕೆಯುಡಬ್ಲೂಜೆ ದತ್ತಿನಿಧಿ ಪ್ರಶಸ್ತಿಯನ್ನು ಪ್ರದಾನ ಮಾಡಿತ್ತು. ಜೊತೆಗೆ ನಾಡಿಗೇರ ಅವರು ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.

ಕೆಯುಡಬ್ಲೂಜೆ ಸಂತಾಪ:

ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನಕ್ಕೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

- Advertisement -  - Advertisement - 
Share This Article
error: Content is protected !!
";