ಮಾಜಿ ಪ್ರಧಾನಿ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಉಪ ರಾಷ್ಟ್ರಪತಿ ಜಗದೀಪ್ ಧನಕರ್  

News Desk

ಚಂದ್ರಳ್ಳಿ ನ್ಯೂಸ್, ಬೆಂಗಳೂರು:
ಭಾರತದ ಗೌರವಾನ್ವಿತ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರು ತಮ್ಮ ಪತ್ನಿ ಸುದೇಶ್ ಧನಕರ್ ಅವರೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಗೌರವಾನ್ವಿತ ಉಪ ರಾಷ್ಟ್ರಪತಿಗಳು ವಿಶೇಷವಾಗಿ ನಮ್ಮ ತಾಯಿಯವರಾದ ಚನ್ನಮ್ಮ ದೇವೇಗೌಡರ ಆರೋಗ್ಯ ವಿಚಾರಿಸಿ, ಅವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.

ಬಳಿಕ ಮಾಜಿ ಪ್ರಧಾನಿಗಳ ಜತೆಯಲ್ಲಿಯೇ ಉಪ ರಾಷ್ಟ್ರಪತಿಗಳು ಉಪಹಾರ ಸೇವಿಸಿದರು. ಶ್ರೀಯುತರ  ಆಗಮನ ನನಗೆ, ನಮ್ಮ ಇಡೀ ಕುಟುಂಬಕ್ಕೆ ಬಹಳ ಸಂತೋಷ ಉಂಟು ಮಾಡಿದೆ.

ಅವರ ಪ್ರೀತಿ-ವಿಶ್ವಾಸ, ಔದಾರ್ಯಕ್ಕೆ ಆಭಾರಿ ಆಗಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";