ವಿದ್ಯಾಸಿರಿ ಸೌಲಭ್ಯ : ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಪಿ.ಯು.ಸಿ ಮತ್ತು ಸಮಾನಾಂತರ
, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ(ಊಟ ಮತ್ತು ವಸತಿ ಸಹಾಯ ಯೋಜನೆ), ವಿದ್ಯಾರ್ಥಿವೇತನ ಹಾಗೂ ಶುಲ್ಕ ಮರುಪಾವತಿ ಸೌಲಭ್ಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ ೧೫ರ ವರೆಗೆ ವಿಸ್ತರಿಸಲಾಗಿದೆ.

     ಆಸಕ್ತ ವಿದ್ಯಾರ್ಥಿಗಳು  ಜಾಲತಾಣ  https://ssp.postmatric.karnataka.gov.in  ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.     ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in, [email protected], [email protected] ಅಥವಾ ಇಲಾಖಾ ಸಹಾಯವಾಣಿ ಸಂಖ್ಯೆ. ೮೦೫೦೭೭೦೦೦೫  ಅಥವಾ ದೂ.ಸಂ. ೧೯೦೨ನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";