ಮತಾಂಧ ಪುಂಡರಿಂದ ಕಲ್ಲು ತೂರಾಟ-ವಿಜಯೇಂದ್ರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗಣೇಶ ವಿಸರ್ಜನೆಯ ಮೆರವಣಿಗೆಯ ಸಂದರ್ಭದಲ್ಲಿ ಮತಾಂಧ ಪುಂಡರು ಗುಂಪು ಕಟ್ಟಿಕೊಂಡು ಕಲ್ಲು ತೂರುವ ಘಟನೆಗಳು ಮಂಡ್ಯ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ವರದಿಯಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದ್ದಾರೆ.

ಪೊಲೀಸ್ ಠಾಣೆಗಳು ಹಾಗೂ ಪೊಲೀಸರ ಮೇಲೆ ದಾಳಿ ನಡೆದರೂ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗದ ಪರಿಸ್ಥಿತಿಯನ್ನು ನೋಡುತ್ತಿದ್ದರೆ ರಾಜ್ಯದಲ್ಲಿ ಮೊಘಲ್ ಪ್ರೇರಣೆಯಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ.  ಸರ್ಕಾರದ ಈ ಪಕ್ಷಪಾತ ಹಾಗೂ ಮೃದು ಧೋರಣೆ ರಾಜ್ಯದಲ್ಲಿ ಅರಾಜಕತೆ ಉಂಟಾಗಲು ಕಾರಣವಾಗುತ್ತಿದೆ. ಸರ್ಕಾರ ಮತಾಂಧರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಮುಂದಾಗುವ ಅನಾಹುತಗಳಿಗೆ ಸರ್ಕಾರವೇ ನೇರ ಹೊಣೆಯಾಗಲಿದೆ.

- Advertisement - 

ಹಿಂದೂ ಸಮಾಜದ ಹಿರಿಯರನ್ನು ಕರೆದು ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಬದಲು ಮದ್ದೂರಿನಲ್ಲಿ ಉದ್ವಿಗ್ನ ಸ್ಥಿತಿ ತಲೆದೋರಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ.

ಪೊಲೀಸ್ ಲಾಠಿಚಾರ್ಜ್ ಹಾಗೂ ಬಲವಂತದ ಪ್ರಯೋಗದಿಂದ ಜನಾಕ್ರೋಶವನ್ನು ಹತ್ತಿಕ್ಕಲು ಕರ್ನಾಟಕ ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ, ಹಿಂದೂ ಕಾರ್ಯಕರ್ತರನ್ನು ಸದೆಬಡಿಯುವ ಹುನ್ನಾರ ಸರ್ಕಾರದ ಈ ನಡವಳಿಕೆಯಿಂದ ಸ್ಪಷ್ಟವಾಗುತ್ತಿದೆ. 

- Advertisement - 

ಗೃಹ ಸಚಿವರು ಈ ಕೂಡಲೇ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ತಹಬದಿಗೆ ತರಲು, ನಿನ್ನೆ ಗಣಪತಿ ಉತ್ಸವದ ಮೇಲೆ ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಂಡು ಮದ್ದೂರಿನಲ್ಲಿ ಶಾಂತಿ ನೆಲೆಸಲು ಜರೂರು ಆದ್ಯತೆ ನೀಡಲಿ ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

 

Share This Article
error: Content is protected !!
";