ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಚುನಾವಣೆಯಲ್ಲಿ ಗೆಲುವು ಸಾಧಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಎಸ್. ರಘುನಾಥ್ ಅವರನ್ನು ಹಾಗೂ ನೂತನ ಪದಾಧಿಕಾರಿಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಅಭಿನಂದಿಸಲಾಯಿತು.
ನೂತನ ಅಧ್ಯಕ್ಷರ ನೇತೃತ್ವದಲ್ಲಿ ಸಮಾಜದ ಶ್ರೇಯೋಭಿವೃದ್ಧಿ ಯಶಸ್ವಿಯಾಗಿ ಮುನ್ನಡೆಯಲಿ ಎಂದು ವಿಜಯೇಂದ್ರ ಹಾರೈಸಿದರು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಖಜಾಂಚಿ ಸುಬ್ಬ ನರಸಿಂಹ, ಶಾಸಕರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ ರಾಮಮೂರ್ತಿ, ರಾಜ್ಯ ಪ್ರಕೋಷ್ಠಕಗಳ ಸಂಚಾಲಕ ದತ್ತಾತ್ರಿ, ಬ್ರಾಹ್ಮಣ ಮಹಾಸಭಾದ ಹಿರಿಯ ಉಪಾಧ್ಯಕ್ಷ ಆರ್.ಲಕ್ಷ್ಮಿಕಾಂತ್, ಮಾಜಿ ಅಧ್ಯಕ್ಷ ಎಂ.ಆರ್.ವಿ.ಪ್ರಸಾದ್ ಸೇರಿದಂತೆ ಮಹಾಸಭಾದ ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.