ಚಂದ್ರವಳ್ಳಿ ನ್ಯೂಸ್, ಮೈಸೂರು:
ಕರ್ನಾಟಕ ರಾಜ್ಯ ರಾಜಕೀಯ ಸೇರಿದಂತೆ ಸರ್ಕಾರದಲ್ಲಿ ನವೆಂಬರ್ ತಿಂಗಳಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನಡೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಡೆ ಇದೆ. ಡಿ.ಕೆ.ಶಿವಕುಮಾರ್ ನಡೆ ಸಿದ್ದರಾಮಯ್ಯ ಕಡೆ ಇದೆ. ಆದರೆ ಶಾಸಕರ ನಡೆ ಬೇರೆ ಕಡೆಯೇ ಇದೆ ಎಂದು ವಿಜಯೇಂದ್ರ ಸ್ಫೋಟಕ ಮಾಹಿತಿ ನೀಡಿದ್ದಾರೆ.
ರಾಜಕೀಯ ಅಲ್ಲೋಲ ಕಲ್ಲೋಲ ಸಂಭವಿಸಿದಾಗ ಬಿಜೆಪಿ ನಡೆ ವಿಚಾರದ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಬಿಜೆಪಿ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಲಿದೆ. ರಾಜಕೀಯ ಅವಕಾಶ ಬಂದರೆ ಆಗ ನೋಡೋಣ ಎಂದು ಅವರು ಮಾರ್ಮಿಕವಾಗಿ ಹೇಳಿದ್ದಾರೆ.

