ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಅಕ್ರಮ ವಲಸಿಗರ ಮನೆಗಳ ತೆರವು ವಿಚಾರದಲ್ಲಿ ರಚಿಸಲಾಗಿದ್ದ ಪಕ್ಷದ ಸತ್ಯ ಶೋಧನಾ ಸಮಿತಿಯಿಂದ ಇಂದು ವರದಿಯನ್ನು ಸ್ವೀಕರಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಪಕ್ಷದ ಶಾಸಕರಾದ ಎಸ್.ಆರ್. ವಿಶ್ವನಾಥ್ ನೇತೃತ್ವದ ಸತ್ಯಶೋಧನ ತಂಡ ಸ್ಥಳಕ್ಕೆ ಭೇಟಿ ನೀಡಿ, ವ್ಯಾಪಕವಾಗಿ ಮಾಹಿತಿ ಕಲೆ ಹಾಕಿ, ಸದರಿ ಜಾಗದ ಸಂಪೂರ್ಣ ವಿವರ, ಸರ್ವೇ ನಂಬರ್, ಗೂಗಲ್ ಮ್ಯಾಪ್, ಕಾನೂನುಗಳು ಸೇರಿದಂತೆ ಸಮಗ್ರ ವಿವರವನ್ನು ಒಳಗೊಂಡ ವರದಿಯನ್ನು ಸಲ್ಲಿಸಿದೆ.
ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರುಗಳಾದ ಶಾಸಕ ಎಸ್.ಮುನಿರಾಜು, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಪಕ್ಷದ ರಾಜ್ಯ ಉಪಾಧ್ಯಕ್ಷೆ ಮಾಳವಿಕಾ ಅವಿನಾಶ್, ರಾಜ್ಯ ಕಾರ್ಯದರ್ಶಿ ಹೆಚ್.ಸಿ.ತಮ್ಮೇಶ್ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್ ಹರೀಶ್, ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಉಪಸ್ಥಿತರಿದ್ದರು.

