ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮೈಸೂರಿನಲ್ಲಿ ಆಯೋಜಿಸಿದ್ದ ಪಕ್ಷದ ಮೈಸೂರು ವಿಭಾಗದ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿದರು.
ಮುಂದಿನ ದಿನಗಳಲ್ಲಿ ಸಂಘಟನಾ ಶಕ್ತಿ ಬಲ ವೃದ್ಧಿಗೊಳಿಸುವ ಕುರಿತು ಕಾರ್ಯಕರ್ತರು ಹಾಗೂ ಪ್ರಮುಖರು ಸಮನ್ವಯತೆ ಹಾಗೂ ಒಗ್ಗಟ್ಟಿನಿಂದ ಕಾರ್ಯಚಟುವಟಿಕೆಗಳನ್ನು ನಡೆಸಬೇಕೆಂಬ ವಿಜಯೇಂದ್ರ ಮನವಿ ಮಾಡಿದರು.
ಅಲ್ಲದೆ ಸದ್ಯ ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ, ಜನವಿರೋಧಿ ಹಾಗೂ ಅಭಿವೃದ್ಧಿ ವಿರೋಧಿ ಆಡಳಿತದಿಂದ ಜನರ ವಿಶ್ವಾಸ ಕಳೆದುಕೊಂಡಿದ್ದು ಈ ನಿಟ್ಟಿನಲ್ಲಿ ಜನರ ದನಿಯಾಗಿ ಹೋರಾಟಗಳನ್ನು ಕೈಗೆತ್ತಿಕೊಳ್ಳಬೇಕೆಂದು ವಿಜಯೇಂದ್ರ ಕರೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಅಪ್ಪಚ್ಚು ರಂಜನ್, ಶಾಸಕ ಟಿ.ಎಸ್.ಶ್ರೀವತ್ಸ, ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಮಾಜಿ ಸಂಸದ ಪ್ರತಾಪ್ ಸಿಂಹ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ, ಅಲ್ಪಸಂಖ್ಯಾತರ ಮೋರ್ಚಾ ರಾಜ್ಯಾಧ್ಯಕ್ಷ ಅನಿಲ್ ಥಾಮಸ್, ರಾಜ್ಯ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನ್ ಗೌಡ, ಶರಣು ತಳ್ಳೀಕೆರೆ, ಮಾಜಿ ಶಾಸಕ ಹಾಗೂ
ನಗರ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ, ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ರವಿ ಕಾಳಪ್ಪ, ಶ್ರೀಡಾ.ಇಂದ್ರೇಶ್, ಸಿದ್ದೇಶ್ ನಾಗೇಂದ್ರ, ಮಾಜಿ ಶಾಸಕರಾದ ನಿರಂಜನ್ ಕುಮಾರ್, ಡಾ.ಹರ್ಷವರ್ಧನ್, ಬಸವರಾಜು, ಮುಖಂಡರಾದ ಎಸ್ ಬಾಲರಾಜ್, ಶ್ರೀಫಣೀಶ್ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.