ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಶ್ರೀಗಳ ದಿವ್ಯ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರಿನ ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಮೇಳದ ಸಮಾರೋಪ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಭಾಗವಹಿಸಿದ್ದರು.
ಕಪಿಲೆಯ ತೀರದಲ್ಲಿ ಪುಣ್ಯಕ್ಷೇತ್ರವನ್ನು ಸ್ಥಾಪಿಸಿದ ಪೂಜ್ಯ ಆದಿ ಜಗದ್ಗುರು ಶಿವರಾತ್ರೀಶ್ವರ ಶಿವಯೋಗಿಗಳ ತಮ್ಮ ದಿವ್ಯ ತಪಸ್ಸು ಹಾಗೂ ಜಾಗೃತ ಧರ್ಮಕ್ಷೇತ್ರವಾಗಿಸಿದ ಭವ್ಯ ಇತಿಹಾಸದ ಕುರಿತು ಇದೇ ಸಂದರ್ಭದಲ್ಲಿ ಅವರು ಸ್ಮರಿಸಿದರು.
ಹಿರಿಯರು ಹಾಗೂ ನಮ್ಮ ಮಾರ್ಗದರ್ಶಕರಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹರಾದ ಆದರಣೀಯ ದತ್ತಾತ್ರೇಯ ಹೊಸಬಾಳೆ ಅವರು, ಮೇಘಾಲಯ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಸಿ.ಹೆಚ್.ವಿಜಯಶಂಕರ್, ಮಾಜಿ ಶಾಸಕರು ಹಾಗೂ ಚಾಮರಾಜನಗರ ಜಿಲ್ಲಾಧ್ಯಕ್ಷರಾದ ನಿರಂಜನ್ ಕುಮಾರ್, ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಎಲ್.ಆರ್.ಮಹದೇವಸ್ವಾಮಿ ಸೇರಿದಂತೆ ಸಮಾಜದ ಗಣ್ಯರು, ಮುಖಂಡರು ಉಪಸ್ಥಿತರಿದ್ದರು.