ನಕ್ಸಲ್ ತಂಡದ ನಾಯಕ ವಿಕ್ರಂ ಗೌಡ ಎನ್​ಕೌಂಟರ್ ಗೆ ಬಲಿ

News Desk

ಚಂದ್ರವಳ್ಳಿ ನ್ಯೂಸ್, ಉಡುಪಿ:
ಉಡುಪಿ ಭಾಗದ ಕಬ್ಬಿನಾಲೆ ಅರಣ್ಯದಲ್ಲಿ 13 ವರ್ಷಗಳ ನಂತರ ಗುಂಡಿನ ಮೊರತೆ ಎನ್​ಕೌಂಟರ್​ನೊಂದಿಗೆ ಕೇಳಿಬಂದಿದೆ.

ಐದು ಮಂದಿ ಇದ್ದ ನಕ್ಸಲರ ತಂಡ ಸೋಮವಾರ ರಾತ್ರಿ ಗ್ರಾಮಕ್ಕೆ ದಿನಸಿ ಸಾಮಗ್ರಿ ಖರೀದಿಗೆಂದು ಬಂದಿದ್ದಾಗ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ನಡೆಸಿದೆ. ಅಷ್ಟರಲ್ಲಿ ನಕ್ಸಲರು ಪೊಲೀಸರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ನಡೆದ ಎನ್​ಕೌಂಟರ್​​ನಲ್ಲಿ ವಿಕ್ರಂ ಗೌಡ ಹತನಾದರೆ, ಉಳಿದ ನಕ್ಸಲರು ಪರಾರಿಯಾಗಿದ್ದಾರೆ.

ವಿಕ್ರಂ ಗೌಡ ಯಾರು?
ವಿಕ್ರಂ ಗೌಡ ನಕ್ಸಲರ ನೇತ್ರಾವತಿ ದಳದ ನಾಯಕ. ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಪೀತೆಬೈಲ್ ಅರಣ್ಯ ಪ್ರದೇಶದ ಗ್ರಾಮದಲ್ಲಿ ನಡೆದ ಎನ್​ಕೌಂಟರ್​ನಲ್ಲಿ ಹತನಾಗಿದ್ದಾನೆ.

ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ, ಸುಳ್ಯ ಭಾಗದ ಕೆಲವು ಗ್ರಾಮಗಳಿಗೆ ನಕ್ಸಲರು ಭೇಟಿ ನೀಡಿದ ಬಗ್ಗೆ ವರದಿಯಾಗಿತ್ತು. ಅದೇ ರೀತಿ, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಕೆಲವೆಡೆ ನಕ್ಸಲರು ಭೇಟಿ ನೀಡಿದ ಸುಳಿವು ದೊರೆತಿತ್ತು.

ಕೊಪ್ಪ ತಾಲೂಕಿನ ಕಡೆಗುಂಡಿ ಗ್ರಾಮದ ಸುಬ್ಬೆಗೌಡ ಎಂಬವರ ಮನೆಯಲ್ಲಿ 3 ಬಂದೂಕುಗಳು ಪತ್ತೆಯಾಗಿದ್ದವು. ಆ ಮನೆಗೆ ನಕ್ಸಲ್ ನಾಯಕಿ ಮುಂಗಾರು ಲತಾ ಮತ್ತು ಆಕೆಯ ತಂಡ ಭೇಟಿ ನೀಡಿರುವ ಸುಳಿವು ಸಿಕ್ಕಿತ್ತು. ನಂತರ ನಕ್ಸಲರ್ ನಿಗ್ರಹ ಪಡೆ ಕಾರ್ಯಾಚರಣೆ ತೀವ್ರಗೊಳಿಸಿದೆ.

ಅರಣ್ಯ ಒತ್ತುವರಿ ತೆರವು, ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ನಕ್ಸಲರು ಕೊಪ್ಪ, ಶೃಂಗೇರಿ ತಾಲೂಕಿನಲ್ಲಿ ಸಭೆಗಳನ್ನು ನಡೆಸಿರುವ ಶಂಕೆ ವ್ಯಕ್ತವಾಗಿತ್ತು. ಇದೇ ಕಾರಣದಿಂದ ಮಲೆನಾಡು ಹಾಗೂ ಕರವಾಳಿ ಭಾಗದ ಪಶ್ಚಿಮ ಘಟ್ಟದ ಅಂಚಿನ ಗ್ರಾಮಗಳಲ್ಲಿ ನಕ್ಸಲ್ ಚಟುವಟಿಕೆ ಮತ್ತೆ ಹೆಚ್ಚಾಗುತ್ತಿರುವ ಅನುಮಾನ ಇದೆ. ಹಾಗಾಗಿ ನಕ್ಸಲ್ ನಿಗ್ರಹ ಪಡೆ ಕಾರ್ಯಾಚರಣೆ ತನ್ನ ಚಟುವಟಿಕೆಗಳನ್ನು ಚುರುಕುಗೊಳಿಸಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";