ವಿರೇಂದ್ರ ಪಪ್ಪಿ ಮನೆ ಮತ್ತು ಕಚೇರಿಗಳ ಮೇಲೆ ದಾಳಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕೆಸಿ ವೀರೇಂದ್ರ ಪಪ್ಪಿ ಹಾಗೂ ಅವರ ಸಹೋದರ ಚಳ್ಳಕೆರೆ ಪಟ್ಟಣದಲ್ಲಿರುವ 4 ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಶುಕ್ರವಾರ ಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.

ಜಾರಿ ನಿರ್ದೇಶನಾಲಯದ ಬೆಂಗಳೂರು ವಲಯ ಕಚೇರಿ ಅಧಿಕಾರಿಗಳು ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮತ್ತು ಇತರರ ಪ್ರಕರಣಕ್ಕೆ ಸಂಬಂಧಿಸಿದಂತೆ 30 ಸ್ಥಳಗಳಲ್ಲಿ ಶೋಧ ನಡೆಸಿದೆ.

- Advertisement - 

ಚಿತ್ರದುರ್ಗ ಜಿಲ್ಲೆಯ ಆರು ಸ್ಥಳ, ಬೆಂಗಳೂರು ನಗರದ 10 ಸ್ಥಳ, ಜೋಧ್‌ಪುರ ಮೂರು ಸ್ಥಳ, ಹುಬ್ಬಳ್ಳಿ ಒಂದು ಸ್ಥಳ, ಮುಂಬೈ ಎರಡು ಸ್ಥಳ ಮತ್ತು ಗೋವಾ ಐದು ಕ್ಯಾಸಿನೊಗಳು ಸೇರಿದಂತೆ ಎಂಟು ಸ್ಥಳ- ಪಪ್ಪೀಸ್ ಕ್ಯಾಸಿನೊ ಗೋಲ್ಡ್, ಓಷನ್ ರಿವರ್ಸ್ ಕ್ಯಾಸಿನೊ, ಪಪ್ಪೀಸ್ ಕ್ಯಾಸಿನೊ ಪ್ರೈಡ್, ಓಷನ್ 7 ಕ್ಯಾಸಿನೊ ಮತ್ತು ಬಿಗ್ ಡ್ಯಾಡಿ ಕ್ಯಾಸಿನೊ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವೀರೇಂದ್ರ ಅವರು ಕಿಂಗ್ 567, ರಾಜ 567, ಪಪ್ಪೀಸ್ 003, ರತ್ನ ಗೇಮಿಂಗ್ ಮುಂತಾದ ಆನ್‌ಲೈನ್ ಬೆಟ್ಟಿಂಗ್ ಸೈಟ್‌ಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಪಪ್ಪಿ ಅವರ ಸಹೋದರ ಕೆ ಸಿ ತಿಪ್ಪೇಸ್ವಾಮಿ ದುಬೈನಿಂದ ಡೈಮಂಡ್ ಸಾಫ್ಟೆಕ್, ಟಿಆರ್‌ಎಸ್ ಟೆಕ್ನಾಲಜೀಸ್ ಮತ್ತು ಪ್ರೈಮ್ 9 ಟೆಕ್ನಾಲಜೀಸ್ ಎಂಬ ಮೂರು ವ್ಯವಹಾರ ಸಂಸ್ಥೆಗಳನ್ನು ನಿರ್ವಹಿಸುತ್ತಿದ್ದಾರೆಂದು ಆರೋಪಿಸಲಾಗಿದೆ.
ಈ ಸಂಸ್ಥೆಗಳು ಕಾಲ್ ಸೆಂಟರ್ ಸೇವೆಗಳು ಮತ್ತು ವೀರೇಂದ್ರ ಪಪ್ಪಿ ಅವರ ಗೇಮಿಂಗ್ ವ್ಯವಹಾರಕ್ಕೆ ಸಂಬಂಧಪಟ್ಟಿವೆ ಎನ್ನಲಾಗಿದೆ.

ಬೆಂಗಳೂರಿನಲ್ಲಿರುವ ಕಾಂಗ್ರೆಸ್ ನಾಯಕಿ ಕುಸುಮಾ ಹೆಚ್, ಅವರ ಸಹೋದರ ಅನಿಲ್ ಗೌಡ ಎನ್ನುವ ವ್ಯಕ್ತಿಯ ಸ್ಥಳಗಳಲ್ಲೂ ಶೋಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

- Advertisement - 

ಹಿಂದೆಯೂ ದಾಳಿ
20
ಕ್ಕೂ ಹೆಚ್ಚು ವಾಹನದಲ್ಲಿ ಬಂದಿರುವ 40ಕ್ಕೂ ಹೆಚ್ಚು ಇಡಿ ಅಧಿಕಾರಿಗಳು ಮನೆಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಕೆಸಿ ವೀರೇಂದ್ರ ಮನೆ ಮೇಲೆ ಈ ಹಿಂದೆ ಅಂದರೆ 2016ರ ಡಿಸೆಂಬರ್ 11ರಂದು ಐಟಿ ದಾಳಿ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ವಿರೇಂದ್ರ ಪಪ್ಪಿ ಮನೆಯ ಬಾತ್ ರೂಂನಲ್ಲಿ 5 ಕೋಟಿ ರೂಪಾಯಿಗೂ ಹೆಚ್ಚು ಹಣ, 30 ಕೆಜಿಗೂ ಹೆಚ್ಚು ಚಿನ್ನ ಪತ್ತೆ ಆಗಿತ್ತು.

 

 

Share This Article
error: Content is protected !!
";