ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಚಿತ್ರದುರ್ಗ ಪ್ರವೇಶಕ್ಕೆ ನಿರ್ಬಂಧ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಶ್ವ ಹಿಂದೂ ಪರಿಷತ್ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಇವರಿಗೆ ಚಿತ್ರದುರ್ಗ ಜಿಲ್ಲೆಯ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಮಾಡಿದ್ದಾರೆ.

ವಿಶ್ವ ಹಿಂದೂ ಪರಿಷತ್, ಕರ್ನಾಟಕ ದಕ್ಷಿಣ ಪ್ರಾಂತದ  ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಇವರು ಹಿರಿಯೂರು ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಸೆ.22 ರಂದು ಆಯೋಜಿಸಿರುವ ವಿಶ್ವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ದಿಕ್ಸೂಚಿ ಭಾಷಣ ಹಾಗೂ ಅದೇ ದಿನ ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಆಯೋಜಿಸಿರುವ ಹಿಂದೂ ಮಹಾ ಗಣಪತಿ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಅವರ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಲವಾರು ಪ್ರಕರಣಗಳು ವರದಿಯಾಗಿರುತ್ತವೆ.

ಹಾಗಾಗಿ ಚಿತ್ರದುರ್ಗ ಜಿಲ್ಲೆಗೆ ಅವರು ಬರುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಿತ್ರದುರ್ಗ ನಗರದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ವತಿಯಿಂದ ಆಯೋಜಿಸಿರುವ ಶೋಭಾಯಾತ್ರೆ ಮತ್ತು ವಿಸರ್ಜನಾ ಮೆರವಣಿಗೆ ನಡೆಯಲಿದ್ದು ಆ ಮೆರವಣಿಗೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ.

ಈ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಯ್ದುಕೊಂಡು ಹೋಗುವ ಸಲುವಾಗಿ ಸಾರ್ವಜನಿಕರ ಹಿತದೃಷ್ಟಿಯಿಂದ ಸೆ.22 ರಿಂದ ಅಕ್ಟೋಬರ್-07ರವರೆಗೆ ಶರಣ್ ಪಂಪ್‌ವೆಲ್ ಇವರಿಗೆ ಚಿತ್ರದುರ್ಗ ಜಿಲ್ಲೆಯಾದ್ಯಾಂತ ಪ್ರವೇಶವನ್ನು ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ.

 

- Advertisement -  - Advertisement - 
Share This Article
error: Content is protected !!
";