ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ: ಸರಳ ಆಚರಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ವಿಶ್ವಕರ್ಮ ಅಮರಶಿಲ್ಪಿ  ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಸಮಾರಂಭವನ್ನು ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್ ಅವರ ನಿಧನದ ಶೋಕಾಚರಣೆ ಹಿನ್ನಲೆಯಲ್ಲಿ ಸರಳವಾಗಿ ಹಮ್ಮಿಕೊಳ್ಳಲಾಗಿತ್ತು.

ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ  ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ  ಸಮರ್ಪಿಸಿದರು.

  ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ್, ಜಿಲ್ಲಾ ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಕೆ.ಟಿ.ಸುರೇಶಾಚಾರ್ಯ, ವಿಶ್ವಕರ್ಮ ಕಾಳಿಕಾಂಬ ಕಲ್ಯಾಣಮಂಟಪ ಟ್ರಸ್ಟ್ ಅಧ್ಯಕ್ಷ .ಶಂಕರಾಚಾರ್, ಉಪಾಧ್ಯಕ್ಷ ಬಾಲಬ್ರಹ್ಮಚಾರ್,  ಸಮಾಜದ ಮುಖಂಡರಾದ ನಾಗಾರಾಜಾಚಾರ್, ಶಿಲ್ಪಿ ಸುರೇಶ್, ಸುನೀಲ್ ಕುಮಾರ್, ಆನಂದಚಾರ್, ನಾಗೇಂದ್ರಚಾರ್, ಶಿವಣ್ಣಚಾರ್, ಮಂಜುನಾಥಚಾರ್, ಮಲ್ಲಿಕಾರ್ಜುನಚಾರ್ ಸೇರಿದಂತೆ ಮತ್ತಿತರರು ಇದ್ದರು.

- Advertisement -  - Advertisement - 
Share This Article
error: Content is protected !!
";