ಗ್ರಾಮ ಪಂಚಾಯ್ತಿಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

News Desk

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ :
ಹಿಂದಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಲೋಕಾಯುಕ್ತ ಅಧಿಕಾರಿಗಳ ತಂಡ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ವಿಚಾರಣೆ ನಡೆಸಿದರು.

 ತಾಲೂಕಿನ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯಾಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿದ್ದು, ಹಳೇ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ, ಕಳೆದ ಎರಡು ವರ್ಷದ ಹಿಂದೆ ಪಂಚಾಯಿತಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಎರಡು ತಿಂಗಳ ಹಿಂದೆಯೂ ಸಹ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು.

ಕೈಗಾರಿಕಾ ಪ್ರದೇಶವನ್ನ ಒಳಗೊಂಡಿರುವ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ, ಕೆಲವು ಕಾರ್ಖಾನೆಗಳು ಯಾವುದೇ ಅನುಮತಿ ಇಲ್ಲದೆ ಕೆಲಸ ಮಾಡುತ್ತಿವೆ, ಹಾಗೆಯೇ ಅನುಮತಿ ಇಲ್ಲದೆ ಪಿ.ಜಿ ಗಳನ್ನು ನಡೆಸಲಾಗುತ್ತಿದೆ, ಈ ಬಗ್ಗೆ ಸಾರ್ವಜನಿಕ ದೂರುಗಳ ಬಂದ ಹಿನ್ನಲೆ ಲೋಕಾಯುಕ್ತ ಅಧಿಕಾರಿಗಳು ಪಂಚಾಯಿತಿ ಮೇಲೆ ದಾಳಿ ನಡೆಸಿ ಕಾಗದ ಪತ್ರಗಳ ಪರಿಶೀಲನೆಯನ್ನು ನಡೆಸಿದ್ದರು.

 

 

Share This Article
error: Content is protected !!
";