ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿಯವರು ಸೆ.14ರಂದು ಚಿತ್ರದುರ್ಗ ನಗರಕ್ಕೆ ಭೇಟಿ ನೀಡಲಿದ್ದಾರೆ.
ಸೆ.14 ರ ಶನಿವಾರದಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಬೆಳಿಗ್ಗೆ 10 ಗಂಟೆಗೆ ಚಿತ್ರದುರ್ಗ ನಗರದ ಜಿಲ್ಲಾ ಭಾಲಭವನದಲ್ಲಿ ಹಮ್ಮಿಕೊಂಡಿರುವ “ಕಾಡುಗೊಲ್ಲರಲ್ಲಿ ಹುಟ್ಟುಮುಟ್ಟು-ಅರಿವಿನ ಪಯಣ” ಕಾರ್ಯಕ್ರಮ ಉದ್ಘಾಟಿಸುವರು.
ತದನಂತರ ಮಧ್ಯಾಹ್ನ 2.30ಕ್ಕೆ ಜಿಲ್ಲಾ ಆಸ್ಪತ್ರೆ ಹಾಗೂ 3.30ಕ್ಕೆ ಚಿತ್ರದುರ್ಗ ನಗರದ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಲಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್ ತಿಳಿಸಿದ್ದಾರೆ.