ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಮುಖಂಡರೊಂದಿಗೆ ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಶಿಕಾರಿಪುರದಲ್ಲಿ ಹಾದು ಹೋಗುವ ರಾಜ್ಯ ಹೆದ್ದಾರಿ ನಂ-57 ಶಿವಮೊಗ್ಗ- ಶಿಕಾರಿಪುರ -ಹಾನಗಲ್ -ತಡಸ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ಕುಟ್ರಳ್ಳಿ ಸುಂಕ ವಸೂಲಾತಿ ಕೇಂದ್ರದಿಂದ
ನಮ್ಮ ರೈತರು ಹಾಗೂ ಸಾರ್ವಜನಿಕರಿಗೆ ತೊಂದರೆಗಳಾಗುತ್ತಿದ್ದು ಶೀಘ್ರ ಟೋಲ್ ತೆರವುಗೊಳಿಸುವಂತೆ ಮನವಿ ಮಾಡಲಾಯಿತು.
ಈ ವೇಳೆ ಮಾನ್ಯ ಸಚಿವರು ಸದ್ಯದಲ್ಲೇ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ತಮ್ಮ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿ ತಿಳಿಸಿದ್ದಾರೆ.