ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ತಾಲ್ಲೂಕಿನ ಗುಡ್ಡದ ರಂಗವ್ವನಹಳ್ಳಿಯ ದಾವಣಗೆರೆ ವಿಶ್ವವಿದ್ಯಾನಿಲಯ ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಕೇಂದ್ರದ ಸಭಾಂಗಣದಲ್ಲಿ ಈಚೆಗೆ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಆಚರಿಸಲಾಯಿತು.
ದಾವಣಗೆರೆ ವಿಶ್ವವಿದ್ಯಾನಿಲಯ ಸ್ನಾತಕೋತ್ತರ ಕೇಂದ್ರ ಜ್ಞಾನ ಗಂಗೋತ್ರಿ ರಾಷ್ಟ್ರೀಯ ಸೇವಾ ಯೋಜನೆ 1 ಮತ್ತು 2 ಘಟಕ, ಚಿತ್ರದುರ್ಗ ವೈದ್ಯಕೀಯ ಕಾಲೇಜು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ 162ನೇ ಜಯಂತಿ ಕಾರ್ಯಕ್ರಮದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.
ನಂತರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಸ್ನಾತಕೋತ್ತರ ಕೇಂದ್ರಕ್ಕೆ ಕ್ರೀಡಾ ಸಾಮಾಗ್ರಿಗಳನ್ನು ಪಡೆಯಲಾಯಿತು.
ದಾವಣಗೆರೆ ವಿಶ್ವವಿದ್ಯಾನಿಲಯ ಪ್ರಾಧ್ಯಾಪಕ ಡಾ.ಸ್ವಾಮಿ ಸ್ವಾಮಿ ವಿವೇಕಾನಂದರ ಕುರಿತು ಉಪನ್ಯಾಸ ನೀಡಿ, ಸ್ವಾಮಿ ವಿವೇಕಾನಂದರ 162ನೇ ಜಯಂತಿಯನ್ನು ಆಚರಿಸುತ್ತಿದ್ದೇವೆ. ವಿವೇಕಾನಂದರು ವಿಶ್ವದ ಯೂತ್ ಐಕಾನ್ ಆಗಿದ್ದು, ಅವರ ಚಿಂತನೆಗಳನ್ನು ಆಳವಡಿಸಿಕೊಳ್ಳಬೇಕು ಎಂದು ಹೇಳಿದರು.
ಚಿತ್ರದುರ್ಗ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಯುವರಾಜ್ ಮಾತನಾಡಿ, ನಮ್ಮ ದೇಶದ ಶಕ್ತಿ ಯುವಕರು. ಇಂದಿನ ಯುವಕರಿಗೆ ವಿದ್ಯೆ ಕಲಿಸುವ ಬಗ್ಗೆ ಉತ್ತಮ ಮಾರ್ಗದರ್ಶಕರು ಸಿಗುತ್ತಿಲ್ಲ ಎಂದು ಹೇಳಿದರು.
ಕಾರ್ಯಕ್ರಮದ ಅಂಗವಾಗಿ ನಡೆಸಲಾದ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಎನ್ಎಸ್ಎಸ್ ಘಟಕ–1ರ ಕಾರ್ಯಕ್ರಮಾಧಿಕಾರಿ ಡಾ.ಎಂ.ಸುಂದರಂ ನಿರ್ವಹಿಸಿದರು. ಎನ್ಎಸ್ಎಸ್ ಘಟಕ–2ರ ಕಾರ್ಯಕ್ರಮಾಧಿಕಾರಿ ಬಿ.ಟಿ.ನಿವೇದಿತಾ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕ ಡಾ.ಸತ್ಯನಾರಾಯಣ, ಸ್ನಾತಕೋತ್ತರಕೇಂದ್ರದ ಡಾ.ರಾಜೇಂದ್ರ ಪ್ರಸಾದ್, ಎಸ್, ಡಾ. ಭೀಮಾಶಂಕರ ಜೋಶಿ, ಡಾ.ರೂಪೇಶ್ ಕುಮಾರ್.ಆರ್, ಡಾ. ಮಂಜುನಾಥ್, ಡಾ. ಉಷಾ ಹಾಗೂ ಕಛೇರಿ ಅಧೀಕ್ಷಕರಾದ ಗಿರಿಜಮ್ಮ, ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ಮತ್ತು ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.