ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ವಾಲಿಬಾಲ್ ಮತ್ತು ಅಥ್ಲೆಟಿಕ್ಸ್ ಕ್ರೀಡೆಗಳಿಗೆ ಸಂಬಂಧಿಸಿದಂತೆ ಉಚಿತ ಬೇಸಿಗೆ ಕ್ರೀಡಾ ತರಬೇತಿ ಶಿಬಿರ ಆಯೋಜಿಸಲಾಗಿದೆ.
ಏಪ್ರಿಲ್ 10 ರಿಂದ 30ರ ವರೆಗೆ, ಪ್ರತಿನಿತ್ಯ ಬೆಳಗ್ಗೆ 6.30 ರಿಂದ 8.30 ಗಂಟೆಯ ವರೆಗೆ ಮತ್ತು ಸಂಜೆ 5 ರಿಂದ 7 ಗಂಟೆಯ ವರಗೆ ತರಬೇತಿ ನೀಡಲಾಗುವುದು. ಹಾಸ್ಟೆಲ್ ಮಕ್ಕಳು ಸೇರಿದಂತೆ ಕ್ರೀಡೆಯಲ್ಲಿ ಆಸಕ್ತಿ ಇರುವ ವಿದ್ಯಾರ್ಥಿಗಳು ಹಾಗೂ ಕ್ರೀಡಾಪಟುಗಳು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ವಾಲಿಬಾಲ್ ತರಬೇತುದಾರ ಮಹಮ್ಮದ್ ಮಹೀಬುಲ್ಲಾ ಮೊಬೈಲ್ ಸಂಖ್ಯೆ 9611673475 ಮತ್ತು ಅಥ್ಲೆಟಿಕ್ ತರಬೇತುದಾರ ತಿಪ್ಪಣ್ಣ ಎಸ್ ಮಾಳಿ ಮೊಬೈಲ್ ಸಂಖ್ಯೆ 9380889647 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

