ನವೆಂಬರ್ ತಿಂಗಳಲ್ಲಿ ಸಂಪುಟ ಪುನಾರಚನೆ?

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನವೆಂಬರ್ ಗೆ ಎರಡೂವರೆ ವರ್ಷ ಪೂರ್ಣಗಳ್ಳಲಿದ್ದು ಸಚಿವ ಸಂಪುಟ ಪುನಾರಚನೆ ಚರ್ಚೆಗಳು ಶುರುವಾಗಿದ್ದು
, ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನುವ ಮಾಹಿತಿ ಲಭ್ಯವಾಗುತ್ತಿದೆ.

ಈ ಕುರಿತು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಅವರು ದೆಹಲಿಯಲ್ಲಿ ಮಾತನಾಡಿ, ನವೆಂಬರ್ ನಲ್ಲಿ ಸಂಪುಟ ಪುನರ್ ರಚನೆಯಾಗಲಿದೆ. ಶೇ 50ರಷ್ಟು ಸಚಿವರು ಬದಲಾವಣೆಯಾಗುವ ಸಾಧ್ಯತೆ ಇದೆ. ಸಚಿವ ಸ್ಥಾನ ದಿಂದ ಹೊರ ಬಂದವರಿಗೆ ಪಕ್ಷದ ಕೆಲಸ ವಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

- Advertisement - 

ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವ ಸಾಧ್ಯತೆಗಳಿದ್ದು ಎರಡು ದಶಕಗಳಿಂದ ಕಿತ್ತೂರು ಕರ್ನಾಟಕ ಭಾಗದಲ್ಲಿ ಅಲ್ಪಸಂಖ್ಯಾತರಿಗೆ ಸಚಿವ ಸ್ಥಾನ ನೀಡಿಲ್ಲ. ಹಾಗಾಗಿ ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ ಎಂದು ಅವರು ಹೇಳಿದರು.

ಸಲೀಂ ಅಹಮದ್ ಅವರ ಈ ಹೇಳಿಕೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು, ಸಂಪುಟದಿಂದ ಯಾರಿಗೆ ಕೊಕ್ ಕೊಡುತ್ತಾರೆ ಎನ್ನುವ ಆತಂಕ ಸಚಿವರುಗಳಲ್ಲಿ ಮನೆ ಮಾಡಿದೆ. ಈಗಾಗಲೇ ಕೆಲ ಸಚಿವ ಸ್ಥಾನ ಆಕಾಂಕ್ಷಿಗಳು ಸಚಿವ ಸ್ಥಾನಕ್ಕಾಗಿ ಲಾಭಿ ಆರಂಭಿಸಿರುವುದು ಗುಟ್ಟಾಗಿ ಉಳಿದಿಲ್ಲ.

- Advertisement - 

Share This Article
error: Content is protected !!
";