ಚಂದ್ರವಳ್ಳಿ ನ್ಯೂಸ್, ಬಾಗಲಕೋಟೆ:
ರಾಜ್ಯ ಸಚಿವ ಸಂಪುಟ ಪುನಾರಚನೆ ಕಾರ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ. ಈ ಬಗ್ಗೆ ಸಿದ್ದರಾಮಯ್ಯಅವರೇ ನಿರ್ಧಾರ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಾನು ರಾಜಕೀಯ ಜೀವನ ಪ್ರಾರಂಭಿಸಿದ್ದೇ ಸಹಕಾರಿ ಕ್ಷೇತ್ರದ ಮೂಲಕ. ಇಲ್ಲಿನ ಸಹಕಾರಿ ಬ್ಯಾಂಕ್ ಉತ್ತಮವಾಗಿ ನಡೆಯುತ್ತಿದೆ.
ಹಿರಿಯರು ಮತ್ತು ನನ್ನ ಸ್ನೇಹಿತರು ಬ್ಯಾಂಕ್ ಅಭಿವೃದ್ಧಿಪಡಿಸಿದ್ದಾರೆ. ಅದಕ್ಕಾಗಿ ಕಾರ್ಯಕ್ರಮಕ್ಕೆ ಬಂದಿದ್ದೇನೆ ಎಂದು ಅವರು ತಿಳಿಸಿದರು.
ದೆಹಲಿಯಲ್ಲಿ ಕರ್ನಾಟಕ ಭವನದ ಉದ್ಘಾಟನೆ ಇದೆ. ಅದರೂ ಇಲ್ಲಿಗೆ ಬಂದಿದ್ದೇನೆ. ಕರ್ನಾಟಕ ಭವನ ಉದ್ಘಾಟನೆಗೆ ರಾಜನಾಥ್ ಸಿಂಗ್ ಸೇರಿದಂತೆ ಬೇರೆ ಬೇರೆ ಇಲಾಖೆಯವರನ್ನೂ ಕರೆದಿದ್ದೇವೆ ಎಂದು ತಿಳಿಸಿದರು.
ಮುಂದುವರೆದು ಮಾತನಾಡಿ ಶಿವಕುಮಾರ್, ಹಾಲಿನ ದರ ಹೆಚ್ಚಳಕ್ಕೆ ಯಾಕೆ ವಿರೋಧ ಮಾಡಬೇಕು. ರೈತರು ಬದುಕಬೇಕೋ ಬೇಡವೋ?. ರೈತರು ಬದುಕಬೇಕು ಅದಕ್ಕೆ ದರ ಏರಿಕೆ ಮಾಡಿದ್ದೇವೆ. ಬೆಲೆ ಏರಿಕೆಯಿಂದ ಜನ ತತ್ತರಿಸುತ್ತಿದ್ದಾರೆ. ಅವರನ್ನು ಬದುಕಿಸಬೇಕು ಅಂತ ಐದು ಗ್ಯಾರಂಟಿ ಕೊಟ್ಟಿದ್ದೇವೆ ಎಂದು ಅವರು ತಿಳಿಸಿದರು.
ಈಗಾಗಲೇ ಸಂಸತ್ನಲ್ಲಿ ವಕ್ಫ್ ಬಿಲ್ ಮಂಡನೆ ವಿಚಾರದ ಆ ಬಗ್ಗೆ ನಮ್ಮ ರಾಷ್ಟ್ರೀಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ ಎಂದು ಶಿವಕುಮಾರ್ ತಿಳಿಸಿದರು.