ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಲಾರ ಲೋಕಸಭಾ ಕ್ಷೇತ್ರದ ಜಾತ್ಯತೀತ ಜನತಾದಳ ಪಕ್ಷದ ಸಂಸದ ಎಂ. ಮಲ್ಲೇಶ್ ಬಾಬು ಅವರು, ಲೋಕಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಬೆಂಬಲಿಸಿ ಮಾತನಾಡಿದರು ಎಂದು ಜೆಡಿಎಸ್ ತಿಳಿಸಿದೆ.
ದೇಶಾದ್ಯಂತ ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ಹೆಚ್ಚಿನ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ನ್ಯಾಯಪರತೆಯನ್ನು ತರುವ ಗುರಿಯನ್ನು ಹೊಂದಿರುವ ಮಹತ್ವದ ಈ ಬಿಲ್ ಶಾಸಕಾಂಗದ ಸುಧಾರಣೆಯಾಗಿದೆ ಎಂದು ಜೆಡಿಎಸ್ ತಿಳಿಸಿದೆ.
ಗೌರವಾನ್ವಿತ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರ ಕ್ರಿಯಾತ್ಮಕ ನಾಯಕತ್ವದಲ್ಲಿ ನ್ಯಾಯ ಮತ್ತು ಸಮಾನ ಆಡಳಿತವನ್ನು ಖಚಿತಪಡಿಸಿಕೊಳ್ಳಲು, ಸರ್ಕಾರದ ಅಚಲ ಬದ್ಧತೆಗೆ ಈ ವಕ್ಫ್ ತಿದ್ದುಪಡಿ ಮಸೂದೆ ಸಾಕ್ಷಿಯಾಗಿದೆ ಎಂದು ಜೆಡಿಎಸ್ ತಿಳಿಸಿದೆ.
ನಮ್ಮ ಜಾತ್ಯತೀತ ಜನತಾದಳ ಪಕ್ಷದ ನಾಯಕರು, ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರು ರಾಷ್ಟ್ರಕವಿ ಕುವೆಂಪು ಅವರ “ಸರ್ವ ಜನಾಂಗದ ಶಾಂತಿಯ ತೋಟ” ಎಂಬ ಮಹಾನ್ ತತ್ವವನ್ನು ಅಳವಡಿಸಿಕೊಂಡು ರಾಜಕಾರಣದಲ್ಲಿ ಮಾದರಿಯಾಗಿದ್ದಾರೆ.
ಆದರೆ, ಕಾಂಗ್ರೆಸ್ ಪಕ್ಷವು ಒಂದು ಸಮುದಾಯದ ಓಲೈಕೆಗಾಗಿ ವೋಟ್ ಬ್ಯಾಂಕ್ ರಾಜಕೀಯ ಮಾಡುತ್ತಿದೆ. ಕರ್ನಾಟಕದಲ್ಲಿಯೂ ಒಡೆದು ಆಳುವ ಕುಟಿಲ ನೀತಿ ಮುಂದುವರಿಸಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸಂಸದರು ಅಭಿಪ್ರಾಯ ವ್ಯಕ್ತಪಡಿಸಿದರು ಎಂದು ಜೆಡಿಎಸ್ ತಿಳಿಸಿದೆ.