ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ ಐತಿಹಾಸಿಕ ಕ್ಷಣದ ಸಂಭ್ರಮ” ಬಿಜೆಪಿಗರು ಸಿಹಿ ಹಂಚಿಕೆ ಮಾಡಿ ಸಂಭ್ರಮಾಚರಣೆ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿಯನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ಮುಂದುವರೆದಿದ್ದು ಲೋಕಸಭೆಯಲ್ಲಿ ತಡರಾತ್ರಿ ಐತಿಹಾಸಿಕ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರವಾದ ಹಿನ್ನೆಲೆಯಲ್ಲಿ ಪಕ್ಷದ ಪ್ರಮುಖರು ಹಾಗೂ ಶಾಸಕರೊಂದಿಗೆ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಹಲವಾರು ದಶಕಗಳಿಂದ ವಕ್ಫ್ ಕಾಯಿದೆ ಬಗ್ಗೆ ದೇಶ- ರಾಜ್ಯದಲ್ಲಿ ಚರ್ಚೆ ನಡೆಯುತ್ತಿತ್ತು. ನಮ್ಮ ರಾಜ್ಯದಲ್ಲಿ ಸಾವಿರ ವರ್ಷಗಳ ಇತಿಹಾಸ ಇರುವ ದೇವಾಲಯಗಳು, ಧಾರ್ಮಿಕ ಸಂಸ್ಥೆಗಳ ಜಮೀನನ್ನು, ರಾಜ್ಯದ ಲಕ್ಷ ಲಕ್ಷ ರೈತರ ಜಮೀನನ್ನು ಕೂಡ ವಕ್ಫ್ ಬೋರ್ಡ್ ಹೆಸರು ಹೇಳಿಕೊಂಡು ಕಿತ್ತುಕೊಳ್ಳುವ ಕೆಲಸ ನಡೆದಿತ್ತು. ಇದರ ವಿರುದ್ಧ ಬಿಜೆಪಿ, ಕೆಲ ತಿಂಗಳುಗಳ ಹಿಂದೆ ಪ್ರತಿಭಟನೆ ಮಾಡಿತ್ತು. ಕೇಂದ್ರದಲ್ಲಿ ನಮ್ಮ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ NDA ಸರ್ಕಾರವು ವಕ್ಫ್ ಮಂಡಳಿ ಹೆಸರಿನಲ್ಲಿ ದೇಶ, ರಾಜ್ಯದ ಜನರಿಗೆ ಆಗುತ್ತಿದ್ದ ದೋಖಾ, ಅನ್ಯಾಯ ಸರಿಪಡಿಸಲು ಈ ಮಸೂದೆ ಜಾರಿಗೆ ತಂದಿರುವುದನ್ನು ಹಿಂದೂಗಳಷ್ಟೇ ಅಲ್ಲ, ಮುಸಲ್ಮಾನರೂ ಸ್ವಾಗತಿಸಿದ್ದಾರೆ.
ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ ಸಮಿತಿ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಆರ್.ಅಶೋಕ, ವಿಧಾನ ಪರಿಷತ್‌ವಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ನಮ್ಮೆಲ್ಲ ಶಾಸಕರು, ವಿಧಾನ ಪರಿಷತ್‌ಸದಸ್ಯರುಗಳು, ಮಾಜಿ ಶಾಸಕರು, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.