ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ವತಿಯಿಂದ ಮಾರ್ಚ್ 21 ರಿಂದ 28 ರವರೆಗೆ ನಡೆದ ಜಲ ಸಂರಕ್ಷಣಾ ಅಭಿಯಾನ ‘ಜಲವೇ ಜೀವ‘ ಸಪ್ತಾಹದಲ್ಲಿ 5,33,642 ಜನರು ಪ್ರತಿಜ್ಞೆ ಸ್ವೀಕರಿಸಿ,
ಜಲ ಸಂರಕ್ಷಣೆಯಲ್ಲಿ ಗಿನ್ನಿಸ್ ವಿಶ್ವದಾಖಲೆ ಬರೆದ ಹಿನ್ನೆಲೆಯಲ್ಲಿ ಅಧಿಕೃತ ಪ್ರಮಾಣ ಪತ್ರ ಸ್ವೀಕರಿಸಲಾಯಿತು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು.
ಇದೊಂದು ಐತಿಹಾಸಿಕ ಸಾಧನೆ ಆಗಿದ್ದು, ಇದಕ್ಕಾಗಿ ಶ್ರಮಿಸಿದ ಹಾಗೂ ಪ್ರತಿಜ್ಞೆ ಸ್ವೀಕರಿಸಿದ ಸರ್ವರಿಗೂ ಅಭಿನಂದನೆಗಳನ್ನು ಡಿಸಿಎಂ ಅವರು ಸಲ್ಲಿಸಿದ್ದಾರೆ.