ನೀರು ಪೂರೈಕೆಯಲ್ಲಿ ವ್ಯತ್ಯಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾವೇರಿ 4ನೇ ಹಂತ 2ನೇ ಘಟ್ಟದ ಕಾನಿಅ(ಪೂರ್ವ)-1 ರ ವ್ಯಾಪ್ತಿಗೆ ಒಳಪಡುವ ಮಾರತ್ತಹಳ್ಳಿ ಜೀವಿಕಾ ಆಸ್ಪತ್ರೆ ಸಮೀಪ 800 ಮಿ.ಮೀ. ವ್ಯಾಸದ ಹೂಡಿ ಜಿ.ಎಲ್.ಆರ್. ಹರಿವು ಮಾರ್ಗವನ್ನು ಸ್ಥಗಿತಗೊಳಿಸುವ ಕಾಮಗಾರಿಯನ್ನು ಕೈಗೆತ್ತಿಕೊಳ್ಳುತ್ತಿರುವುದರಿಂದ ಫೆಬ್ರವರಿ 20 ರಂದು ಬೆಳಿಗ್ಗೆ 09:00 ಗಂಟೆಯಿಂದ ರಾತ್ರಿ:09:00 ಗಂಟೆಯವರೆಗೆ ಸುಮಾರು 12 ಗಂಟೆಗಳ ಕಾಲ ವಿವಿಧ ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಮಾರತ್ತಹಳ್ಳಿ ದೊಡ್ಡಕುಂದಿ, ಮುನ್ನಕೊಳಲು, ಓ.ಎಂ.ಬಿ.ಆರ್. ಲೇಔಟ್, ಹೆಚ್.ಆರ್.ಬಿ.ಆರ್ ಲೇಔಟ್, ಸಿಗೇಹಳ್ಳಿ, ಬಟ್ಟರಹಳ್ಳಿ ಮೇಡೆಹಳ್ಳಿ ಟಿ.ಸಿ.ಪಾಳ್ಯ ವಿಜಿನಪುರ ಬೆಳಂದೂರು. ಯಮಲೂರು, ಮುರುಗೇಶ್ ಪಾಳ್ಯ, ಕೋಣನಅಗ್ರಹಾರ, ಸಿ.ವಿ.ರಾಮನ್ ನಗರ, ಇಂದ್ರನಗರ, ತಿಪ್ಪಸಂದ್ರ ಜೀವನ್ ಭೀಮಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ವ್ಯತ್ಯಯವಾಗಲಿದೆ.

ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಬೆಂಗಳೂರು ಜಲಮಂಡಳಿಯ ಸಾರ್ವಜನಿಕ ಸಂಪರ್ಕಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Share This Article
error: Content is protected !!
";