ಚಂದ್ರವಳ್ಳಿ ನ್ಯೂಸ್, ಕೂಡ್ಲಿಗಿ:
ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಉಳಿಸಲು ಜನರು ಮುಂದಾಗಬೇಕು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೂಡ್ಲಿಗಿ ಪಟ್ಟಣದ ಮೇಲ್ವಿಚಾರಕಿ ಜ್ಯೋತಿಗುಡಿ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಮಾತೃ ಶ್ರೀ ಹೇಮಾವತಿ ಅಮ್ಮನವರ ಆಶಯದಂತೆ ಕೂಡ್ಲಿಗಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ನಗರ ಕಾರ್ಯಕ್ಷೇತ್ರದ ನೇತ್ರಾವತಿ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಂದ ಬೇಸಿಗೆ ಸಂದರ್ಭ ಪ್ರಾಣಿ ಪಕ್ಷಿಗಳಿಗೆ ನೀರುಣಿಸಲು ಯೋಜನೆ ವತಿಯಿಂದ ಹಮ್ಮಿಕೊಂಡಿರುವ ಈ ಮಹತ್ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಬೇಸಿಗೆಯ ರಣಬಿಸಿಲಿನ ತಾಪಮಾನದ ತೀವ್ರತೆಯಿಂದಾಗಿ ಪ್ರಾಣಿ ಪಕ್ಷಿ ಸಂಕುಲ ಬಳಲುತ್ತಿವೆ.ಕುಡಿಯುವ ನೀರು ಹಾಗೂ ಆಹಾರಕ್ಕಾಗಿ ಪರಿತಪಿಸುತ್ತಿವೆ. ಹಾಗಾಗಿ ಬೇಸಿಗೆ ಸಂದರ್ಭ ಮನೆಯ ಬಳಿಯಲ್ಲಿ ಮೂಕ ಪ್ರಾಣಿ ಪಕ್ಷಿಗಳಿಗೆ ನೀರು, ಆಹಾರ ಒದಗಿಸುವ ಕಾರ್ಯವನ್ನು ಸಾರ್ವಜನಿಕರು ಮತ್ತು ನಮ್ಮ ಯೋಜನೆಯ ಸದಸ್ಯರು ಮಾಡಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಕೇಂದ್ರದ ಸಮನ್ವಯಾಧಿಕಾರಿ ರೇಖಾ ನೀರಲಕೇರಿ, ಸೇವಾ ಪ್ರತಿನಿಧಿಗಳಾದ ಡಿ.ಎಚ್.ಪೂರ್ಣಿಮಾ,ಉಮಾ,ನೇತ್ರಾವತಿ ಜ್ಞಾನ ವಿಕಾಸ ಕೇಂದ್ರದ ಕೊತ್ಲಮ್ಮ,ನಸ್ರೀನ್, ಪರ್ವಿನ್,ದೇವಕ್ಕ, ಸೇರಿದಂತೆ ಅನೇಕ ಸದಸ್ಯರು ಉಪಸ್ಥಿತರಿದ್ದರು ಎಂದು ಸಿ ಅರುಣ್ ಕುಮಾರ್ ಮಾಹಿತಿ ನೀಡಿದ್ದಾರೆ.