ನಾವೇನು ಪಾಕಿಸ್ತಾನದಲ್ಲಿದ್ದೇವಾ ಎಂಬ ಅನುಮಾನ ಬಂದಿದೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮದ್ದೂರಿನಲ್ಲಿ ಗಣೇಶೋತ್ಸವ ಮೆರವಣಿಗೆ ಸಂದರ್ಭ ನಡೆದ ಕಲ್ಲುತೂರಾಟ ಪ್ರಕರಣದ ಬಗ್ಗೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ಪ್ರತಿಕ್ರಿಯಿಸಿ
, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾವೇನು ಪಾಕಿಸ್ತಾನದಲ್ಲಿದ್ದೇವಾ ಎಂಬ ಅನುಮಾನ ಬರುವಂತೆ ಈ ಸರ್ಕಾರ ಮಾಡುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

- Advertisement - 

ಕಳೆದ ಎರಡು ವರ್ಷದಿಂದಲೂ ಇದೇ ರೀತಿಯ ಘಟನೆಗಳು ನಡೆಯುತ್ತಿವೆ. ಧರ್ಮಸ್ಥಳ ಆಯ್ತು, ಚಾಮುಂಡೇಶ್ವರಿ ಆಯ್ತು, ಈಗ ಮದ್ದೂರಿನಲ್ಲಿ ಅವರ ಗ್ಯಾಂಗ್ ಬಾಲ ಬಿಚ್ಚಿದೆ. ಅವರೆಲ್ಲ ಸಿಎಂ ಸಿದ್ದರಾಮಯ್ಯ ಸುತ್ತ ಸುತ್ತುಕೊಂಡು ಬಿಟ್ಟಿದ್ದಾರೆ. ಈ ಘಟನೆಗೆ ನೇರ ಕಾರಣ ಸರ್ಕಾರ.

ಸರ್ಕಾರದ ಕುಮ್ಮಕ್ಕು ಇಲ್ಲದೆ ಈ ಘಟನೆಗಳು ನಡೆಯುತ್ತಿರಲಿಲ್ಲ. ಸಾರ್ವಜನಿಕ ರಸ್ತೆಯಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ಮಾಡಿದರೆ ತಪ್ಪೇನು? ಸಾರ್ವಜನಿಕ ರಸ್ತೆ ಇವರಪ್ಪನ ಆಸ್ತಿಯಾ ಎಂದು ಅಶೋಕ್ ಗುಡುಗಿದರು.

- Advertisement - 

Share This Article
error: Content is protected !!
";