ಹೆಲ್ಮೆಟ್ ಧರಿಸಿ ಪ್ರಾಣ ಉಳಿಸಿಕೊಳ್ಳಿ- ಸಾರಿಗೆ ಅಧಿಕಾರಿ ಭರತ್

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಾಹನ ಸವಾರರೆಲ್ಲರೂ ಸಂಚಾರ ನಿಯಮಗಳನ್ನು ತಪ್ಪದೇ ಪಾಲಿಸಿದರೆ ಅನೇಕ ಅಪಘಾತ ಹಾಗೂ ಆಘಾತಗಳನ್ನು ತಡೆಯಬಹುದಾಗಿದೆ ಎಂದು ಚಿತ್ರದುರ್ಗ ಪ್ರಾದೇಶಿಕ ಸಾರಿಗೆ ಅಧಿಕಾರಿ ಭರತ್.ಎಂ. ಕಾಳಿಸಿಂಗೆ ಸಲಹೆ ಮಾಡಿದರು.
ನೆಹರು ಯುವ ಕೇಂದ್ರ
, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಪ್ರಾದೇಶಿಕ ಸಾರಿಗೆ ಕಛೇರಿ ಚಿತ್ರದುರ್ಗ, ಎಸ್. ಜೆ.ಎಂ ಪಾಲಿಟೆಕ್ನಿಕ್ ಮತ್ತು ನೀಲಕಂಠ ಮೆಮೋರಿಯಲ್ ಪ್ಯಾರಾಮೆಡಿಕಲ್ ಕಾಲೇಜು ಚಿತ್ರದುರ್ಗ ಇವರುಗಳ ಸಂಯುಕ್ತ ಆಶ್ರಯದಲ್ಲಿ ರಾಷ್ಟೀಯ ರಸ್ತೆ ಸುರಕ್ಷತಾ ಮಾಸಾಚರಣೆ ಅಂಗವಾಗಿ ಚಿತ್ರದುರ್ಗ ಎಸ್. ಜೆ.ಎಂ ಪಾಲಿಟೆಕ್ನಿಕ್  ಕಾಲೇಜಿನನಲ್ಲಿ ಏರ್ಪಡಿಸಿದ್ದ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆಯ ಪ್ರತಿಜ್ಞಾ ವಿಧಿ ಭೋದಿಸಿ, ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ  ಸಂಚಾರಿ ನಿಯಮ ಮತ್ತು ಕಡ್ಡಾಯ ಮಾಹಿತಿ ಚಿನ್ಹೆಗಳು, ಹಾಗೂ ರಸ್ತೆ ಅಪಘಾತ ನಡೆದ ಸಂದರ್ಭದಲ್ಲಿ ವಹಿಸಬೇಕಾದ ಎಚ್ಚರಿಕೆಗಳ ಬಗ್ಗೆ ಜಾಗೃತಿ ಮೂಡಿಸಿದರು. ದ್ವಿಚಕ್ರ ವಾಹನ ಸವಾರರು ಮೊಬೈಲ್ ನಲ್ಲಿ ಮಾತನಾಡುತ್ತಾ ವಾಹನ ಚಾಲನೆ ಮಾಡಬೇಡಿ, ಹೆಲ್ಮೆಟ್ ಧರಿಸಿ ವಾಹನ ಚಾಲನೆ ಮಾಡಿ, ರಸ್ತೆ ಸುರಕ್ಷತೆ ಕುರಿತು ಮುತುವರ್ಜಿ ವಹಿಸಿ ಪ್ರಾಣ ರಕ್ಷಿಸಿಕೊಳ್ಳಬೇಕು, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಬೇಕು,ರಸ್ತೆಯಲ್ಲಿ ಸಂಚರಿಸುವಾಗ ಸುರಕ್ಷಿತ ಕ್ರಮಗಳನ್ನು ಅನುಸರಿಸಬೇಕೆಂದು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಎಸ್.ಜೆ.ಎಂ ಪಾಲಿಟೆಕ್ನಿಕ್ ಪ್ರಾಂಶುಪಾಲ ಎಸ್.ವಿ. ರವಿಶಂಕರ್ ಮಾತನಾಡಿ  18 ವರ್ಷಕ್ಕಿಂತ ಕಡಿಮೆ ಇರುವ ವಿದ್ಯಾರ್ಥಿಗಳು ವಾಹನ ಚಾಲನೆ ಮಾಡಬಾರದು ಹಾಗೂ ಶಿಸ್ತಿನ ಜೊತೆ ಸಂಸ್ಕಾರ ಮೈಗೂಡಿಸಿಕೊಂಡು ಉತ್ತಮ ನಾಗರೀಕರಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಕ್ರಮದ ನಂತರ ಕಾಲೇಜಿನ ವಿದ್ಯಾರ್ಥಿಗಳಿಗೆ ರಕ್ತದ ಗುಂಪಿನ ಪರೀಕ್ಷೆ ಮಾಡಲಾಯಿತು.

ಈ ಸಂದರ್ಭದಲ್ಲಿ ನೆಹರು ಯುವ ಕೇಂದ್ರದ ಯುವಜನ ಅಧಿಕಾರಿ ಸುಹಾಸ್, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಮಜಹರ್ ಉಲ್ಲಾ, ಅಮೃತ್ ನರ್ಸಿಂಗ್ ಕಾಲೇಜ್ ಪ್ರಾಂಶುಪಾಲ ವಜಾಹತ್ ಉಲ್ಲಾ, ಪ್ರಾದೇಶಿಕ ಕಚೇರಿ ವಾಹನ ನಿರೀಕ್ಷಕ ರಾಜೇಶ್, ಎಸ್. ಜೆ. ಎಂ .ಪಾಲಿಟೆಕ್ನಿಕ್ ನ ಉಪನ್ಯಾಸಕರಾದ ರಾಜೇಶ್ ಕುಮಾರ್, ಗಂಗಾಧರ್, ಲತಾ, ಪ್ರತಿಮಾ, ಸವಿತಾ, ಸಬಿತಾ, ವಾಣಿ, ರಘು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

 

- Advertisement -  - Advertisement - 
Share This Article
error: Content is protected !!
";