ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಅಂಗವಾಗಿ ಕಲಬುರ್ಗಿಯಲ್ಲಿಂದು ಸರ್ದಾರ್ ವಲ್ಲಭಾಯಿ ಪಟೇಲರ ಪುತ್ಥಳಿಗೆ ಮಾಲಾರ್ಪಣೆ ನೆರವೇರಿಸಿ ನಂತರ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸುವ ಮೂಲಕ ಗೌರವ ಸಲ್ಲಿಸಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು.
ಹೈದರಾಬಾದ್ ನಿಜಾಮ ಸಂಸ್ಥಾನದ ವಿರುದ್ಧ ಕಾರ್ಯಾಚರಣೆ ನಡೆಸಿ, ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಸ್ವಾತಂತ್ರ್ಯವನ್ನು ದೊರಕಿಸಿಕೊಟ್ಟ ದೇಶದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕೊಡುಗೆಗಳನ್ನು ವಿಜಯೇಂದ್ರ ಸ್ಮರಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಮಟ್ಟಿಮಡು (b_mattimadu), ವಿಧಾನ ಪರಿಷತ್ ಸದಸ್ಯರಾದ ಬಿ.ಜಿ ಪಾಟೀಲ್, ಶಶಿಲ್ ನಮೋಶಿ, ಶಾಸಕ ಡಾ ಅವಿನಾಶ್ ಜಾದವ್, ಮಾಜಿ ಸಚಿವ ಬಾಬುರಾವ್ ಚೌಹಾಣ್,
ಕಲ್ಬುರ್ಗಿ ಗ್ರಾಮೀಣ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮಾಜಿ ಶಾಸಕ ಅಮರನಾಥ್ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್, ಮುಖಂಡರಾದ ಶಿವರಾಜ್ ಪಾಟೀಲ್ ರದ್ದೇವಾಡಿ, ಮುಖಂಡರಾದ ನಿತಿನ್ ಗುತ್ತೇದಾರ್, ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

