ವಿವಿ ಸಾಗರಕ್ಕೆ ಗುರುವಾರ ಹರಿದು ಬರುತ್ತಿರುವ ನೀರಿನ ಒಳ ಹರಿವು ಎಷ್ಟು
ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಭದ್ರಾ ಪಂಪ್ ಹೌಸ್ ನಿಂದ ವಾಣಿ ವಿಲಾಸ ಸಾಗರಕ್ಕೆ ಲಿಫ್ಟ್ ಮಾಡುತ್ತಿರುವ ನೀರು ಮತ್ತು ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ನಿರೀಕ್ಷೆಗೂ ಮೀರಿದ ನೀರಿನ ಒಳ ಹರಿವು ಹೆಚ್ಚಳವಾಗಿದೆ.
ಅಕ್ಟೋಬರ್-23ರಂದು ಗುರುವಾರ ಬೆಳಿಗ್ಗೆ 8 ಗಂಟೆ ವೇಳೆಗೆ 6702 ಕ್ಯೂಸೆಕ್ ಗೆ ನೀರಿನ ಒಳ ಹರಿವು ಹೆಚ್ಚಳವಾಗಿದೆ. 132.50 ಅಡಿಗೆ ಏರಿಕೆಯಾಗಿದೆ. ಅಲ್ಲದೆ ಕೋಡಿ ಮೂಲಕ 6418 ಕ್ಯೂಸೆಕ್ ನೀರು ಹೊರ ಹರಿಯುತ್ತಿದೆ.

