ಚಂದ್ರವಳ್ಳಿ ನ್ಯೂಸ್, ಹಿರಿಯೂರು :
ಮಧ್ಯ ಕರ್ನಾಟಕದ ಏಕೈಕ ರೈತರ ಜೀವನಾಡಿ ವಾಣಿವಿಲಾಸ ಜಲಾಶಯದ ನೀರಿನ ಮಟ್ಟ ಶುಕ್ರವಾರ 123.60 ಅಡಿಗೆ ಏರಿಕೆಯಾಗಿದೆ.
ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಕಳೆದೊಂದು ತಿಂಗಳಿನಿಂದ ಭದ್ರಾ ಜಲಾಶಯದಿಂದ ಪ್ರತಿ ದಿನ 1040 ಕ್ಯೂಸೆಕ್ ನೀರಿನ ಒಳ ಹರಿವು ಇದೆ.
ತರೀಕೆರೆ ಸಮೀಪದ ಬೆಟ್ಟದ ತಾವರೆಕೆರೆಯ ಪಂಪ್ ಹೌಸ್ ನಿಂದ ಒಂದು ಪಂಪ್ ಲಿಫ್ಟ್ ಮಾಡಲಾಗುತ್ತಿದೆ. ಲಿಫ್ಟ್ ಮಾಡಲಾಗುತ್ತಿರುವ ನೀರಿನ ಒಳ ಹರಿವು 550 ಕ್ಯೂಸೆಕ್ ಇದೆ.
ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಪಂಪ್ ಮಾಡುವ ನೀರು ಸೇರಿದಂತೆ ಹೊಸದುರ್ಗ, ಕಡೂರು, ಬಿರೂರು, ತರೀಕೆರೆ, ಅಜ್ಜಂಪುರ ಸುತ್ತ ಮುತ್ತಲ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೆಚ್ಚಿನ ಕ್ಯೂಸೆಕ್ ನೀರು ಶನಿ ವಾರ ಹರಿದು ಬಂದಿದ್ದು, ಪ್ರಸ್ತುತ ಜಲಾಶಯದ ನೀರಿನ ಮಟ್ಟ 123 .60 ಅಡಿಗೆ ಏರಿಕೆಯಾಗಿದೆ.
ಇನ್ನು ವಾಣಿ ವಿಲಾಸ ಜಲಾಶಯದ ನೀರಿನ ಸಂಗ್ರಹ ಸಾಮರ್ಥ್ಯ ಒಟ್ಟು 135 ಅಡಿ ಆಗಿದ್ದು , 130 ಅಡಿಗೆ ಕೋಡಿ ಹರಿಯಲಿದೆ. ಜಲಾಶಯದಲ್ಲಿ 30 ಟಿಎಂಸಿ ಅಡಿ ನೀರು ಸಂಗ್ರಹವಾಗುವ ಸಾಮರ್ಥ್ಯ ಹೊಂದಿದೆ.