ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕದ ವಿಚಾರದಲ್ಲಿ ಭಾರತೀಯ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಂದು ಕೊಟ್ಟಿದ್ದು ಖಾಲಿ ಚೊಂಬು. ಇಂದು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದರು.
ಮೂಲಸೌಕರ್ಯ, ರೈಲ್ವೆ ಯೋಜನೆಗಳಿಂದ ಹಿಡಿದು ಕುಡಿಯುವ ನೀರಿಗೆ ಅನುದಾನದವರೆಗೆ ಕರ್ನಾಟಕ ರಾಜ್ಯಕ್ಕೆ ಮೋದಿ ಸರ್ಕಾರ ಭರಪೂರ ಕೊಡುಗೆ ನೀಡುತ್ತಿದೆ.
ಕೋಲಾರದ ವೇಮಗಲ್‌ನಲ್ಲಿ ದೇಶದಲ್ಲೇ ಮೊದಲ ಖಾಸಗಿ ಮಿನಿ ಹೆಲಿಕಾಪ್ಟರ್ ನಿರ್ಮಾಣ ಘಟಕ ಇಂದಿನಿಂದ ಕಾರ್ಯಾರಂಭ ಮಾಡಲಿದೆ. ರಕ್ಷಣಾ ಮಿನಿ ಹೆಲಿಕಾಪ್ಟರ್ ನಿರ್ಮಾಣ ಘಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಇಮಾನ್ಯುವಲ್ ಮ್ಯಾಕ್ರಾನ್ ಅವರು ವರ್ಚುವಲ್‌ಆಗಿ ಉದ್ಘಾಟಿಸಿಲಿದ್ದಾರೆ. ಉಭಯ ದೇಶಗಳ ರಕ್ಷಣಾ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ವತಿಯಿಂದ ನಿರ್ಮಾಣಗೊಂಡ ಈ ಘಟಕವು ರಕ್ಷಣಾ ಇಲಾಖೆಗೆ ಸೇರಿದ ಹೆಲಿಕಾಪ್ಟರ್ಗಳನ್ನು ತಯಾರಿಸಲಿದೆ. ಈ ಘಟಕವು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ನೂರಾರು ಜನತೆಗೆ ಉದ್ಯೋಗ ಸೃಷ್ಟಿಸುವುದಲ್ಲದೇ, ಆ ಪ್ರದೇಶದ ಸಮಗ್ರ ಅಭಿವೃದ್ಧಿಗೆ ನೆರವಾಗಲಿದೆ.
ಕರ್ನಾಟಕದ ಅಭಿವೃದ್ಧಿಯಲ್ಲಿ ಹೊಸ ಭಾಷ್ಯ ಬರೆದ ಮೋದಿ ಸರ್ಕಾರಕ್ಕೆ ರಾಜ್ಯದ ಜನತೆಯ ಪರವಾಗಿ ಅಶೋಕ್ ಧನ್ಯವಾದಗಳನ್ನು ಅರ್ಪಿಸಿದರು.

