ಕೆರೆಗಳ್ಳರ ಕೈಗೆ ಅಧಿಕಾರ ಸಿಕ್ಕಿದರೆ ಬೆಂಗಳೂರು ಇನ್ನೇನಾದೀತು?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರು ನಗರವನ್ನು ಬ್ರ್ಯಾಂಡ್ ಬೆಂಗಳೂರು ಮಾಡುವೆ ಎಂದಿದ್ದ  ಗಿರಾಕಿ ಡಿ.ಕೆ.ಶಿವಕುಮಾರ್ ಅವರು ನಮ್ಮ ಹೆಮ್ಮೆಯ ನಗರವನ್ನು ಇಟಲಿಯ ವೆನಿಸ್ ಮಾಡಿ ಕೃತಾರ್ಥರಾಗಿದ್ದಾರೆ ಎಂದು ಜೆಡಿಎಸ್ ಟ್ವೀಟ್ ಮಾಡಿ ಆರೋಪಿಸಿದೆ.

ಭಾರತದ ಸಿಲಿಕಾನ್ ವ್ಯಾಲಿ, ಉದ್ಯಾನನಗರಿಯಾಗಿದ್ದ ಬೆಂಗಳೂರಿನ ಕೆರೆಗಳನ್ನು ಒಂದಾದ ಮೇಲೆ ಒಂದರಂತೆ ನುಂಗಿದ ಪರಿಣಾಮ ಬೆಂಗಳೂರಿಗೆ ಬೆಂಗಳೂರೇ ಕೆರೆಯಾಗಿಬಿಟ್ಟಿದೆ!! ಎಂದು ಜೆಡಿಎಸ್ ಆರೋಪಿಸಿದೆ.

ಕೆರೆಗಳ್ಳರ ಕೈಗೆ ಅಧಿಕಾರ ಸಿಕ್ಕಿದರೆ ಇನ್ನೇನಾದೀತು? ಮಳೆ ನೀರನ್ನು ಆಕಾಶಕ್ಕೆ ವಾಪಸ್ ಕಳಿಸುತ್ತೀರಾ? ಅಥವಾ ಬೆಂಗಳೂರು ರಸ್ತೆಗಳ ಮೇಲೆ ದೋಣಿ ಸಾರಿಗೆ ಮಾಡುತ್ತೀರಾ? ಎಂದು ಜೆಡಿಎಸ್ ವ್ಯಂಗ್ಯವಾಡಿದೆ.

 

 

- Advertisement -  - Advertisement -  - Advertisement - 
Share This Article
error: Content is protected !!
";