ವಿಧಾನ ಪರಿಷತ್‌ ಸದಸ್ಯ ಕೆ.ಗೋವಿಂದರಾಜು ಬಂಧನ ಯಾವಾಗ?

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನ ಪರಿಷತ್‌ ಸದಸ್ಯ ಕೆ. ಗೋವಿಂದರಾಜು ಬಂಧನ ಯಾವಾಗ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಮಾಜಿ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು ಅವರನ್ನು ಮೊದಲು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಜೆಡಿಎಸ್‌ ಪಕ್ಷವು ಆಗ್ರಹಿಸುತ್ತದೆ. 

- Advertisement - 

 RCB  ಐಪಿಎಲ್‌ ಗೆಲುವಿಗಾಗಿ ವಿಧಾನಸೌಧದ ಬಳಿ ಆಟಗಾರರಿಗೆ ಸನ್ಮಾನ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿನಂದನಾ ಸಮಾರಂಭಕ್ಕೆ ಪೊಲೀಸರು ಅನುಮತಿ ನಿರಾಕರಿಸಿದ್ದರು. ಆದರೆ ಮುಖ್ಯಮಂತ್ರಿಗಳ ಮಾಜಿ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜ್ ಪೊಲೀಸರ ಮೇಲೆ ಒತ್ತಡ ಹೇರಿ 2 ಕಡೆ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಮಾಡಿದ್ದರು.

- Advertisement - 

ಕಾಲ್ತುಳಿತ ಘಟನೆಯಲ್ಲಿ 11 ಅಮಾಯಕರು ಮೃತರಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರು, ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಗೋವಿಂದರಾಜು ಅವರನ್ನು ವಜಾಗೊಳಿಸಿ “ಕೈ” ತೊಳೆದುಕೊಂಡಿದ್ದಾರೆ. ಆದರೆ, ದುರಂತಕ್ಕೆ ಪ್ರಮುಖ ಕಾರಣ ಹಾಗೂ ಸೂತ್ರಧಾರ ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಅವರನ್ನು ಬಂಧಿಸಬೇಕು ಮತ್ತು ಅವರ ಪಾತ್ರದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಎಂದು ಬೆಂಗಳೂರು ಪೊಲೀಸ್‌ ಆಯುಕ್ತರಿಗೆ ದೂರು ಸಹ ಸಲ್ಲಿಸಲಾಗಿದೆ ಎಂದು ಜೆಡಿಎಸ್ ತಿಳಿಸಿದೆ. 

 

- Advertisement - 

Share This Article
error: Content is protected !!
";