ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಹಿಳೆಯರಿಗೆ ಸುರಕ್ಷತೆಯ ಗ್ಯಾರೆಂಟಿ ಎಲ್ಲಿದೆ ಸ್ವಾಮಿ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ಕರ್ನಾಟಕವನ್ನು ಗೂಂಡಾ ರಾಜ್ಯವನ್ನಾಗಿ ಮಾಡುತ್ತಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸಿ ಗೂಂಡಾಗಳ ಕೈಗೆ ಅಧಿಕಾರ ಕೊಟ್ಟಿದೆ ಎಂದು ಅಶೋಕ್ ದೂರಿದರು.
ಬೆಂಗಳೂರಿನಂತಹ ರಾಜಧಾನಿಯಲ್ಲೇ ಮಹಿಳೆಯರ ಮೇಲೆ ಹಲ್ಲೆ ದೌರ್ಜನ್ಯ, ಅತ್ಯಾಚಾರ ಆಗುತ್ತಿದ್ದರೂ ಕ್ರಮ ಕೈಗೊಳ್ಳದೆ ಗೂಂಡಾಗಳ ರಕ್ಷಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಧೋರಣೆಯಿಂದ ಬೀದಿ ಕಾಮಣ್ಣರು ರಾಜಾರೋಷವಾಗಿ ಮಹಿಳೆಯರ ಮೇಲೆ ಎರಗುತ್ತಿದ್ದಾರೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದರು.
ಸಿಲಿಕಾನ್ ಸಿಟಿಯನ್ನು ಕ್ರೈಂ ಸಿಟಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಬೆಂಗಳೂರು ನಗರದ ಇಮೇಜ್ ಗೆ ಧಕ್ಕೆ ತರುತ್ತಿದೆ ಎಂದು ಅವರು ಆರೋಪಿಸಿದರು..